ಸಾರಾಂಶ
‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಲಖನೌ: ‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಲ್ಲಿ ನಡೆದ ‘ಸಂವಿಧಾನ ಸಮ್ಮೇಳನ’ ಕಾರ್ಯಕ್ರಮದಲ್ಲಿ ಸಭಿಕರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎಂದು ಹೇಳುವುದಕ್ಕೆ ಬಯಸುತ್ತೇನೆ. ಪಕ್ಷದ ನಾಯಕನಾದರೂ ಕೂಡ ನಾನು ಈ ಮಾತನ್ನು ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಕೂಡ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ’ ಎಂದರು. ಆದರೆ ಯಾವ ಬದಲಾವಣೆ ಎಂಬುದನ್ನು ಹೇಳಲಿಲ್ಲ.
ಇದೇ ಸಂದರ್ಭದಲ್ಲಿ ಮೋದಿ ಒಬ್ಬ ರಾಜ, ಪ್ರಧಾನಿಯಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂಬ ಮಾತನ್ನು ಪುನರುಚ್ಚರಿಸಿದರು. ‘ ನರೇಂದ್ರ ಮೋದಿ ಅವರನ್ನು ಚರ್ಚೆಯಲ್ಲಿ ಎದುರಿಸಲು ಶೇ.100ರಷ್ಟು ಸಿದ್ಧ. ಆದರೆ ಪ್ರಧಾನಿ ಇದಕ್ಕೆ ಒಪ್ಪಿಕೊಳ್ಳುವುದಿಲ್ಲ’ ಎಂದರು.