ಬಿಜೆಪಿ ನಾಯಕರು ಏನೇ ಹೇಳಿದರೂ 2028ಕ್ಕೆ ಡಿ.ಕೆ.ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

 ಬೆಂಗಳೂರು : ಬಿಜೆಪಿ ನಾಯಕರು ಏನೇ ಹೇಳಿದರೂ 2028ಕ್ಕೆ ಡಿ.ಕೆ.ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಎಲ್ಲರೂ ಸೂಟುಬೂಟು ಸಿದ್ಧ ಮಾಡಿಕೊಳ್ಳಿ ಎಂದಿದ್ದರು

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, 2023ರಲ್ಲಿ ಅಮಿತ್‌ ಶಾ ಅವರು ಬಿಜೆಪಿಗೆ 122 ಸ್ಥಾನಗಳು ದೊರೆಯುತ್ತವೆ. ಎಲ್ಲರೂ ಸೂಟುಬೂಟು ಸಿದ್ಧ ಮಾಡಿಕೊಳ್ಳಿ ಎಂದಿದ್ದರು. 

ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದೆ

ಆಗ ನಾನು ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದೆ. ನನ್ನ ಹೇಳಿಕೆ ನಿಜವಾಯಿತು. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿ.ಕೆ.ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.