ಸಾರಾಂಶ
ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎನ್ನಲಾದ ರಾಜು ಕಪನೂರ್ ಜತೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು : ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಎನ್ನಲಾದ ರಾಜು ಕಪನೂರ್ ಜತೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿದ್ದಾರೆ.
ಸೋಮವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೆ ರಾಜು ಕಪನೂರ್ ಇರುವ ಫೋಟೋಗಳನ್ನು ಬಿಡುಗಡೆ ಮಾಡಲಾಯಿತು. ಮೃತ ಸಚಿನ್ ಸಾವಿಗೆ ಕಾರಣರಾಗಿರುವ ರಾಜು ಕಪನೂರ್ ಹೆಸರು ಮರಣ ಪತ್ರದಲ್ಲಿದ್ದು, ಖರ್ಗೆ ಕುಟುಂಬಕ್ಕೆ ಆಪ್ತನಾಗಿದ್ದಾನೆ. ಸಚಿವರ ಬೆಂಬಲದಿಂದಾಗಿಯೇ ಘಟನೆ ನಡೆದಿದೆ ಎಂದು ವಿಜಯೇಂದ್ರ ಆರೋಪಿಸಿದರು.
ರಾಜು ಕಪನೂರ್ ಮತ್ತು ಇತರರು ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.