‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಶಾಸಕರು ಹಾಗೂ ಜನರ ನಡುವೆ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ. ಇದರ ನಿಯಂತ್ರಣಕ್ಕೂ ಕ್ರಮವಾಗಬೇಕು’ ಎಂದು ಬಿಜೆಪಿ ಸದಸ್ಯ ವಿ.ಸುನೀಲ್‌ ಕುಮಾರ್‌ ಆಗ್ರಹಿಸಿದರು.

 ವಿಧಾನಸಭೆ : ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಶಾಸಕರು ಹಾಗೂ ಜನರ ನಡುವೆ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ. ಇದರ ನಿಯಂತ್ರಣಕ್ಕೂ ಕ್ರಮವಾಗಬೇಕು’ ಎಂದು ಬಿಜೆಪಿ ಸದಸ್ಯ ವಿ.ಸುನೀಲ್‌ ಕುಮಾರ್‌ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಹಾಗೂ ಆನ್‌ಲೈನ್‌ ವಂಚನೆ ಕುರಿತ ಬಿಜೆಪಿಯ ಸಿಮೆಂಟ್‌ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಎಲ್ಲ ಕಡೆ ಬೆಟ್ಟಿಂಗ್‌ ಜೋರಾಗಿದೆ’ ಎಂದು ಹೇಳಿದರು.

ಶಾಸಕರು, ಜನರ ನಡುವೆ ಬೆಟ್ಟಿಂಗ್

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿಯ ವಿ. ಸುನೀಲ್ ಕುಮಾರ್, ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆಯೂ ಶಾಸಕರು, ಜನರ ನಡುವೆ ಬೆಟ್ಟಿಂಗ್ ಜೋರಾಗಿ ನಡೆದಿದ್ದು, ಇದರ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಬೇಕಲ್ಲವೇ’ ಎಂದು ನಗುತ್ತಾ ಹೇಳಿದರು.

ಈ ಸಂದರ್ಭದಲ್ಲಿ ಸದನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು. ಆದರೆ ನಸುನಕ್ಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುನೀಲ್ ಕುಮಾರ್ ಅವರ ಕಡೆ ಕೈ ತೋರಿಸಿ ಹುಸಿ ಕೋಪ ತೋರಿಸಿ ನಕ್ಕರು.

ಚನ್ನರಾಜ ಹಟ್ಟಿಕೊಳ್ಳಿ ಟ್ವೀಟ್‌ ಪ್ರಸ್ತಾಪ:

ಇದಕ್ಕೂ ಮೊದಲು ಬಿಜೆಪಿಯ ಅರವಿಂದ ಬೆಲ್ಲದ್ ಅವರು, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಸಲಿಗೆ ಮುಖ್ಯಮಂತ್ರಿ ಯಾರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಈ ವೇಳೆ ಸ್ಪೀಕರ್‌ ಯು.ಟಿ. ಖಾದರ್, ನಿಮಗೆ ಉತ್ತರ ಕರ್ನಾಟಕ ಕುರಿತು ಚರ್ಚೆ ಆಗಬೇಕಾ? ಬೇಡವಾ ಎಂದು ಪ್ರಶ್ನಿಸಿ ಬೆಲ್ಲದ್ ಮಾತಿಗೆ ತೆರೆ ಎಳೆದರು.