ಸಾರಾಂಶ
ಲೋಕಸಭಾ ಚುನಾವಣೆ ಸಂಬಂಧ ಸಿಪಿಎಂ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಿದೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪ್ರಜಾಪ್ರಭುತ್ವದ ಜಾತ್ಯತೀತ ಗುಣಗಳಿಗೆ ಧಕ್ಕೆ ಬಂದಿದೆ.
ನವದೆಹಲಿ: ಲೋಕಸಭಾ ಚುನಾವಣೆ ಸಂಬಂಧ ಸಿಪಿಎಂ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಿದೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪ್ರಜಾಪ್ರಭುತ್ವದ ಜಾತ್ಯತೀತ ಗುಣಗಳಿಗೆ ಧಕ್ಕೆ ಬಂದಿದೆ. ಹೀಗಾಗಿ ದೇಶವನ್ನು ಉಳಿಸುವ ಸಲುವಾಗಿ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಿದೆ ಎಂದು ಅದು ಕರೆಕೊಟ್ಟಿದೆ.
ಜೊತೆಗೆ ತಾನು ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಸಿಎಎ ಕಾಯ್ದೆ ರದ್ದುಗೊಳಿಸಲಾಗುವುದು. ಇದಲ್ಲದೇ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದೆ.ಪ್ರಣಾಳಿಕೆಗಳ ಮುಖ್ಯಾಂಶಗಳು
- ಸಿಎಎ, ಯುಎಪಿಎ ಮತ್ತು ಪಿಎಂಎಲ್‌ಎ ಕಾಯ್ದೆಗಳನ್ನು ರದ್ದುಗೊಳಿಸಲಾಗುವುದು.- ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ/ ಯುವಕರಿಗೆ ಉದ್ಯೋಗ ಭರವಸೆ
- ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ- ಮಕ್ಕಳ ಕಲ್ಯಾಣಕ್ಕೆ ಒತ್ತು/ ಯುವಕರಿಗಾಗಿ ರಾಷ್ಟ್ರೀಯ ಯುವ ನೀತಿ ಜಾರಿ
- ಉಚಿತ ಆರೋಗ್ಯ ಕೊಡಿಸುವುದು/ ಮರಣದಂಡನೆಯ ಕಾಯ್ದೆ ರದ್ದು.