ಮಾನವ ಸರಪಳಿ ರಚಿಸಿ ಮತದಾನ ಜಾಗೃತಿ; ಮಹತ್ವ ಸಾರಿದ ವಿದ್ಯಾರ್ಥಿಗಳು

| Published : Apr 23 2024, 01:49 AM IST / Updated: Apr 23 2024, 04:10 AM IST

ಸಾರಾಂಶ

ಮತದಾನದ ಕುರಿತು ಜಾಗೃತಿ ಮೂಡಿಸಲು ಬಿಬಿಎಂಪಿ ಚುನಾವಣಾ ವಿಭಾಗ ಸೋಮವಾರ ಯಲಹಂಕ ನ್ಯೂಟೌನ್‌ನಲ್ಲಿ ಆಯೋಜಿಸಲಾಗಿದ್ದ ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ಒಂದು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ, ಮತದಾನದ ಮಹತ್ವ ಸಾರಿದರು.

  ಬೆಂಗಳೂರು :  ಮತದಾನದ ಕುರಿತು ಜಾಗೃತಿ ಮೂಡಿಸಲು ಬಿಬಿಎಂಪಿ ಚುನಾವಣಾ ವಿಭಾಗ ಸೋಮವಾರ ಯಲಹಂಕ ನ್ಯೂಟೌನ್‌ನಲ್ಲಿ ಆಯೋಜಿಸಲಾಗಿದ್ದ ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ಒಂದು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ, ಮತದಾನದ ಮಹತ್ವ ಸಾರಿದರು.

ಯಲಹಂಕ ನ್ಯೂ ಟೌನ್ ನಲ್ಲಿರುವ ಹೊಯ್ಸಳ ಮೈದಾನದಲ್ಲಿ ವಿದ್ಯಾರ್ಥಿಗಳು ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್‌ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಮತದಾನದ ಪ್ರಾಮುಖ್ಯತೆ ಕುರಿತಂತೆ ಅರಿವು ಮೂಡಿಸುವ ಕಾರ್ಯ ಮಾಡುವಂತೆ ತಿಳಿಸಿದರು.

ನಂತರ ವಿದ್ಯಾರ್ಥಿಗಳು, ಸಾರ್ವಜನಿಕರು ಹೊಯ್ಸಳ ಮೈದಾನದಿಂದ ಪ್ರಾರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶೇಷಾದ್ರಿಪುರಂ ಕಾಲೇಜುಗೆ ತಲುಪಿತು. ಜಾಥಾ ಸಂದರ್ಭದಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಜನಪದ ಕಲಾ ತಂಡಗಳು ಪ್ರದರ್ಶನ ನೀಡಿದವು.

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಕಾಂತರಾಜು, ಚುನಾವಣಾ ರಾಯಭಾರಿ ನೀತು ವನಜಾಕ್ಷಿ ಇತರರಿದ್ದರು.