ಸಾರಾಂಶ
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬಂದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಶನಿವಾರ ದಲಿತ ಸಚಿವರು ಹಾಗೂ ಶಾಸಕರ ಸಭೆ ಏರ್ಪಡಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬಂದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಶನಿವಾರ ದಲಿತ ಸಚಿವರು ಹಾಗೂ ಶಾಸಕರ ಸಭೆ ಏರ್ಪಡಿಸಿದ್ದಾರೆ.
ಭೋಜನಕೂಟದ ಹೆಸರಿನಲ್ಲಿ ಶನಿವಾರ ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.
ಈ ಹಿಂದೆ ದಲಿತ ಸಚಿವರು, ಶಾಸಕರ ಸಭೆ ಕರೆದಿದ್ದಾಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಬ್ರೇಕ್ ಬಿದ್ದಿತ್ತು. ಇದೀಗ ಒಳ ಮೀಸಲಾತಿ ಕುರಿತು ಚರ್ಚಿಸುವ ಹೆಸರಿನಲ್ಲಿ ದಲಿತ ಎಡ ಹಾಗೂ ಬಲ ಎರಡೂ ಸಮುದಾಯದ ಶಾಸಕರು ಹಾಗೂ ಸಚಿವರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.