ಸಾರಾಂಶ
ಉಪಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಸ್ತಾಪಿಸಿದ ಘಟನೆ ನಡೆಯಿತು.
ಚನ್ನಪಟ್ಟಣ: ಉಪಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಸ್ತಾಪಿಸಿದ ಘಟನೆ ನಡೆಯಿತು.
ಸಮಾವೇಶದಲ್ಲಿ ಮಾತನಾಡಿದ ಬಾಲಕೃಷ್ಣ, ಈ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ದರಾಗಿರುವ ಡಿ.ಕೆ.ಶಿವಕುಮಾರ್ ಎಂದು ಉಲ್ಲೇಖಿಸುವ ಮೂಲಕ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದು ಪರೋಕ್ಷವಾಗಿ ಪ್ರಸ್ತಾಪಿಸಿದರು
ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಬಾಲಕೃಷ್ಣ ಅವರ ಈ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.