ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು: ಬಿಎಸ್‌ವೈ

| Published : Apr 16 2024, 09:22 AM IST

BS Yediyurappa
ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು: ಬಿಎಸ್‌ವೈ
Share this Article
  • FB
  • TW
  • Linkdin
  • Email

ಸಾರಾಂಶ

ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿ :  ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿ, ನಾನು ಮತ್ತೊಮ್ಮೆ ಶ್ರೀಗಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುವೆ. ನಿಮ್ಮ ಮೂಲಕವೂ ನಾನು ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದರು.

ಪ್ರಹ್ಲಾದ ಜೋಶಿ ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಿವೆ. ರಾಜ್ಯಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆಯಿದ್ದು, ಈ ಬಾರಿಯೂ ಜೋಶಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.