ಮಂಜುನಾಥ್‌ರಿಗೆ ಜಯದೇವ ಆಸ್ಪತ್ರೆಗೆ ಆಯ್ಕೆ ಮಾಡದಂತೆ ಡಿಕೆಶಿ ತಡೆಯೊಡ್ಡಿದ್ದರು :ಹೆಚ್‌ಡಿಡಿ

| Published : Apr 18 2024, 11:44 AM IST

HDD
ಮಂಜುನಾಥ್‌ರಿಗೆ ಜಯದೇವ ಆಸ್ಪತ್ರೆಗೆ ಆಯ್ಕೆ ಮಾಡದಂತೆ ಡಿಕೆಶಿ ತಡೆಯೊಡ್ಡಿದ್ದರು :ಹೆಚ್‌ಡಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನ ಮರೆಯಬಾರದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಕನಕಪುರ :  ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನ ಮರೆಯಬಾರದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಈವರೆಗೂ ಒಂದೇ ಒಂದು ಅಸತ್ಯ ನುಡಿದಿಲ್ಲ. ನನ್ನ ಅಳಿಯನನ್ನು ರಾಜಕೀಯಕ್ಕೆ ತರಲು ನನಗೆ ಇಷ್ಟವಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಮಂಜುನಾಥ ಅವರ ಸೇವೆ ದೇಶಕ್ಕೆ ಬೇಕಾಗಿದೆ ಎಂಬ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದರು.

ನೆಹರು ಅವರಿಂದ ಹಿಡಿದು ರಾಜೀವ್ ಗಾಂಧಿಯವರೆಗೂ ಅಧಿಕಾರ ನಡೆಸಿದ ವಂಶಸ್ಥರು ಇವತ್ತು ಗೆಲುವು ಕಾಣಲು ಕೇರಳದ ವಯನಾಡಿಗೆ ಏಕೆ ಹೋಗಿದ್ದಾರೆ ಎಂಬುದನ್ನು ಕಾಂಗ್ರೆಸ್ ಪಕ್ಷದವರು ಅರಿಯಲಿ. ದೇಶದಲ್ಲಿ ಎರಡು ರಾಜಕೀಯ ಪಕ್ಷಗಳ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಒಂದು ಕಡೆ ಎನ್‌ಡಿಎ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಇದ್ದರೆ, ಪ್ರತಿಸ್ಪರ್ಧಿ ಐಎನ್ ಡಿಎ ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಅವರಿಗೆಯೇ ತಿಳಿಯದಾಗಿದೆ. ಡಿ.ಕೆ.ಶಿವಕುಮಾರ್ ರವರು ಖರ್ಗೆಯವರು ಪ್ರಧಾನಿ ಆಗಲಿದ್ದಾರೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದು ಸಾಧ್ಯವಿಲ್ಲ ಎಂದು ಹೇಳುತ್ತಾರೆ ಎಂದು ಟೀಕಿಸಿದರು.