ಸಾರಾಂಶ
ಲೋಕಸಭೆ ಚುನಾವಣೆ ಗೆಲ್ಲಲು 3 ಡಿಸಿಎಂ ಅವಶ್ಯಕತೆ ಇದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ನೇಮಕದ ಬಗ್ಗೆ ಪಕ್ಷದ ವರಿಷ್ಠರು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ
ಬೆಂಗಳೂರು: ರಾಜ್ಯದಲ್ಲಿ 3 ಡಿಸಿಎಂಗಳ ನೇಮಕ ವಿಚಾರ ಗಾಳಿ ಸುದ್ದಿ. ಲೋಕಸಭೆ ಚುನಾವಣೆಗೆ ಮೊದಲು ಹೆಚ್ಚುವರಿ ಡಿಸಿಎಂ ನೇಮಕವಾಗಲಿ ಎಂಬುದು ಸಚಿವ ರಾಜಣ್ಣ ದೃಷ್ಟಿಕೋನ ಹೈಕಮಾಂಡ್ ದೃಷ್ಟಿಕೋನ ಏನೆಂದು ಗೊತ್ತಿಲ್ಲ ಎಂದು ಗೃಹ ಸಚಿವ ಡಾ। ಜಿ. ಪರಮೇಶ್ವರ್ ತಿಳಿಸಿದರು.
ಬೆಂಗಳೂರು: ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ನೇಮಕದ ವಿಚಾರವಾಗಿ ಹೈಕಮಾಂಡ್ ನಾಯಕರು ಉತ್ತರ ನೀಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ವಿಚಾರವಾಗಿ ಹೈ ಕಮಾಂಡ್ ನಾಯಕರು ಉತ್ತರ ನೀಡುತ್ತಾರೆ. ನಾನು ಆ ಬಗ್ಗೆ ಉತ್ತರ ನೀಡುವುದಿಲ್ಲ. ಲೋಕಸಭಾ ಚುನಾವಣೆಯನ್ನು ಗೆಲ್ಲಬೇಕು. ಅದಕ್ಕಾಗಿ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಪ್ರತಿಕ್ರಿಯೆ ನೀಡಿದರು.