ಸಾರಾಂಶ
ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರು : ನೀರಾವರಿ ಹೋರಾಟಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಕೈ ಜೋಡಿಸುವುದಾಗಿ ಹೇಳಿದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ
ಗೌಡ ಈಗ ಬಿಜೆಪಿ ಚಿಯರ್ ಲೀಡರ್
ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಹಿಂದೆಲ್ಲಾ ರಾಜ್ಯದ ಪರ ಮುತ್ಸದ್ದಿ ರೀತಿ ಹೋರಾಡುತ್ತಿದ್ದ ದೇವೇಗೌಡರು ಈಗ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ. ಆದರೂ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಅವರ ಹೋರಾಟಕ್ಕೆ ನಾನು ಮತ್ತು ಡಿಕೆಶಿ ಮಾತ್ರವಲ್ಲ, ಸಮಸ್ತ ಕರ್ನಾಟಕ ಜೊತೆ ಇರುತ್ತದೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ
ಅಧಿಕಾರದಲ್ಲಿದ್ದರೂ ಹೋರಾಟವೇಕೆ?
ಮೇಕೆದಾಟು, ಮಹದಾಯಿ ಯೋಜನೆಗೆ ಒಂದೇ ದಿನದಲ್ಲಿ ಸಹಿ ಮಾಡಿಸುತ್ತೇನೆ ಎಂದಿದ್ದ ದೇವೇಗೌಡರು ಈಗ ಪಕ್ಷಾತೀತವಾಗಿ ಹೋರಾಡೋಣ ಎನ್ನುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದುಕೊಂಡು ಹೋರಾಟ ಯಾಕೆ ಮಾಡಬೇಕು? ಅವರು ಯೋಜನೆಗೆ ಅನುಮತಿ ಕೊಡಿಸಲಿ, ಸಂಪೂರ್ಣ ಬೆಂಬಲದ ಜತೆಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ.
- ಡಿ.ಕೆ.ಶಿವಕುಮಾರ್ ಡಿಸಿಎಂ