ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸದ್ಯದಲ್ಲೇ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಪ್ರಜಾಸೇವೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದಾರೆ.

ಬೆಂಗಳೂರು : ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸದ್ಯದಲ್ಲೇ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಪ್ರಜಾಸೇವೆ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದಾರೆ.

ಉಪಚುನಾವಣೆಗೆ ಎಲ್ಲಾ ಸಿದ್ಧತೆ

ಭಾನುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾವು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.

ಖುದ್ದು ಪ್ರಜಾಸೇವೆ ಕಾರ್ಯಕ್ರಮ

ಚುನಾವಣೆ ಯಾವಾಗ ಘೋಷಣೆ ಆಗುತ್ತದೆ ಎನ್ನುವುದು ತಿಳಿದಿಲ್ಲ. ಶನಿವಾರ ಹಿರಿಯೂರಿನಲ್ಲಿ ನಾನೇ ಖುದ್ದು ಪ್ರಜಾಸೇವೆ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಕಾರ್ಯಕ್ರಮ ಆಯೋಜಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.