ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ದೆಹಲಿಗೆ ತೆರಳಲಿದ್ದು ನಿಗಮ-ಮಂಡಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಹ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ದೆಹಲಿಗೆ ತೆರಳಲಿದ್ದು ನಿಗಮ-ಮಂಡಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಹ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬರುವ ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದಕ್ಕೂ ಮೊದಲು ನಿಗಮ-ಮಂಡಳಿ ಅಧ್ಯಕ್ಷರ ನೇಮಕದ ಗೊಂದಲ ಬಗೆಹರಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಜತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ನೇಮಕ ಹಾಗೂ ಇದೇ ವೇಳೆ ಖಾಲಿ ಇರುವ ಎರಡು ಸ್ಥಾನಗಳ ಭರ್ತಿ ಕುರಿತು ಸಹ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತು ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್‌ ಅವರ ಜೊತೆ ದೆಹಲಿಯಲ್ಲಿ ಶನಿವಾರ ನಡೆಯಲಿರುವ ಜಂಟಿ ಸುದ್ದಿಗೋಷ್ಠಿಯಲ್ಲಿ ಕೂಡ ಡಿ.ಕೆ. ಶಿವಕುಮಾರ್‌ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ಅಜೆಂಡಾ ಏನು?

- ಡಿ.2ರಂದು ಬೆಳಗಾವಿಯಲ್ಲಿ ವಿಧಾನಮಂಡಲ ವಿಶೇಷ ಅಧಿವೇಶನ

- ಅಷ್ಟರೊಳಗೆ ನಿಗಮ ಅಧ್ಯಕ್ಷರ ನೇಮಕದ ಗೊಂದಲ ಇತ್ಯರ್ಥ ಗುರಿ

- ಖಾಲಿ ಇರುವ 2 ಸಂಪುಟ ಸ್ಥಾನಗಳ ಭರ್ತಿ ಉದ್ದೇಶವೂ ಉಂಟು

- ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಜತೆ ಚರ್ಚೆ ಸಾಧ್ಯತೆ

- ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲು ಬಗ್ಗೆ ಸುದ್ದಿಗೋಷ್ಠಿ

- ಕೇರಳ, ತೆಲಂಗಾಣ ಸಿಎಂಗಳ ಜತೆ ಡಿಕೆಶಿ ಭಾಗಿ ಆಗುವ ನಿರೀಕ್ಷೆ