ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ

| Published : Jul 01 2024, 01:45 AM IST / Updated: Jul 01 2024, 05:12 AM IST

GT Devegowda
ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.

 ಮೈಸೂರು :ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದರು.

ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿ ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವೇ? ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ರಿ, ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ, ಇದು ದೊಡ್ಡ ಅಫರಾದ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂಥ ಗೊತ್ತಿಲ್ಲ. ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯಗೆ ಅಧಿಕಾರ ಉಳಿಸಿಕೊಳ್ಳುವುದು ಗೊತ್ತಿದೆ:

ಸಿದ್ದರಾಮಯ್ಯಗೆ ಅಧಿಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬ ಬಗ್ಗೆ ಗೊತ್ತಿದೆ. ಸಿದ್ದರಾಮಯ್ಯ ಸುದೀರ್ಘವಾಗಿ ಮಂತ್ರಿ, ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. 15 ಬಾರಿ ಹಣಕಾಸ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯಾವ ರೀತಿ ಅಧಿಕಾರ ಉಳಿಸಿಕೊಳ್ಳಬೇಕೆಂಬ ಬಗ್ಗೆ ಅವರ ಜೀವನದಲ್ಲಿ ಸಾಕಷ್ಟು ಆಗಿದೆ. ಹೀಗಾಗಿ, ಸಡನ್ ಆಗಿ ಅವರು ಬಿದ್ದು ಬಿಡುತ್ತಾರೆ ಎಂದು ನಾನು ಹೇಳಲ್ಲ ಎಂದರು.

ರಾಜ್ಯ ಸರ್ಕಾರ ಪತನವಾಗುತ್ತೆ, ನಾವು ಬೀಳಿಸುತ್ತೇವೆ ಎಂಬ ಬಗ್ಗೆ ನಾನು ಮಾತನಾಡಲ್ಲ. ಸಂಪೂರ್ಣ ಬಹುಮತವಿರುವ ಸರ್ಕಾರ ಬೀಳಿಸುವ ಪ್ರಶ್ನೇಯೇ ಇಲ್ಲ. ಅವರ ಪಕ್ಷದಲ್ಲೇ ದೀಡಿರ್ ಭಿನ್ನಾಭಿಪ್ರಾಯ ಬಂದರೇ ಸರ್ಕಾರ ಬೀಳಬಹುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೈ ಬಿಟ್ಟಿದ್ದಾರೆ- ಆರೋಪ

ರಾಜ್ಯದಲ್ಲಿ ಅಭಿವೃದ್ಧಿ ಎಂಬುದನ್ನ ಸಂಪೂರ್ಣವಾಗಿ ಕೈ ಬಿಟ್ಟಿದ್ದಾರೆ. 13 ತಿಂಗಳಿನಿಂದ ಯಾವ ಗುಂಡಿಗಳು ಮುಚ್ಚಿಲ್ಲ, ರಸ್ತೆ ಮಾಡಿಲ್ಲ. ನನ್ನ ಕ್ಷೇತ್ರಕ್ಕೆ ಯಾವ ಇಲಾಖೆಯಿಂದಲೂ ಒಂದು ರೂಪಾಯಿ ಅನುದಾನ ಬಂದಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಆರೋಪಿಸಿದರು.

ಹಿಂದೆ ಜಾರಿಯಲ್ಲಿರು ಅಮೃತ ಯೋಜನೆಯ ಕೆಲಸಗಳು ಮಾತ್ರ ನಡೆಯುತ್ತಿದೆ. ಈ ಹಿಂದೆ ಒಂದು ಕ್ಷೇತ್ರಗಳಿಗೆ 20 ಫಲಾನುಭವಿಗಳಿಗೆ ಕಾರು, ಸ್ಕೂಟರ್ ಕೊಡುತ್ತಿದ್ದರು. ಈಗ ಒಂದು ಕ್ಷೇತ್ರಕ್ಕ ಒಂದು ಕಾರು, ಸ್ಕೂಟರ್ ಕೊಡುತ್ತಾರೆ. ಎರಡು ಲಕ್ಷ ಜನ ಸಂಖ್ಯೆಯ ಕ್ಷೇತ್ರದಲ್ಲಿ ಯಾರಿಗೆ ಅಂತ ಕೊಡೊದು ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣಾ ವೇಳೆ ಗ್ಯಾರಂಟಿಗಳ ಮೇಲೆ ಸಂಪೂರ್ಣ ನಿಗಾ ವಹಿಸಿದ್ದರು. ಕ್ಷೇತ್ರದ ಜನರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೆಲಸಗಳು, ಅಭಿವೃದ್ಧಿ ಏನು ಆಗಲ್ಲ ಎಂಬುದು ಜನರಿಗೆ ಅರಿವಾಗುತ್ತಿದೆ ಎಂದ ಅವರು, ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ತನಿಖೆ ನಡೆಯುತ್ತಿದೆ. ವರದಿ ಬಂದ ತಕ್ಷಣ ಅವರ ವಿರುದ್ಧ ಕ್ರಮ‌ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನೂರಕ್ಕೆ ನೂರು ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರೇ ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣದ ಜವಾಬ್ದಾರಿ ಹೊರಬೇಕು. ಸಿದ್ದರಾಮಯ್ಯ ಹಣಕಾಸು ಸಚಿವರಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಹಣ ಮತ್ತೊಂದು ಅಕೌಂಟ್ ಗೆ ಡೆಪಾಸಿಟ್ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಜವಾಬ್ದಾರಿ ಇದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ಕೊಡಬೇಕು. ಎಸ್ಟಿ ಸಮುದಾಯದ ನೂರಾರು ಕೋಟಿ ಹಣ ಹಗಲು ದರೋಡೆಯಾಗಿ. ಇದು ಎಲ್ಲರೂ ತಲೆ ತಗ್ಗಿಸುವ ವಿಚಾರ. ಸಿಎಂ ಸಿದ್ದರಾಮಯ್ಯ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ.

- ಜಿ.ಟಿ.ದೇವೇಗೌಡ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು