ಸಾರಾಂಶ
ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಬೆಂಗಳೂರು : ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನನ್ನ ವ್ಯವಹಾರದ ದಾಖಲೆಗಳು ಅವರ ಬಳಿಯಿದ್ದರೆ ಬಿಡುಗಡೆ ಮಾಡಲಿ.
ಟನ್ ಅಷ್ಟೇ ಅಲ್ಲ, ಭೂಲೋಕ ಎಷ್ಟಿದೆಯೋ ಅಷ್ಟೂ ದಾಖಲೆಗಳನ್ನು ಬಿಡುಗಡೆ ಮಾಡಲಿ. ಅವರು ಏನು ಮಾಡುತ್ತಿದ್ದಾರೆ ಎಂಬುದು ನನಗೂ ತಿಳಿದಿದೆ. ನನ್ನ ಆಸ್ತಿ, ನನ್ನ ಮಕ್ಕಳ ಆಸ್ತಿ, ನನ್ನ ಕುಟುಂಬದವರ ಆಸ್ತಿ ದಾಖಲೆಗಳನ್ನೆಲ್ಲ ತಂದಿಟ್ಟುಕೊಂಡಿದ್ದಾರೆ. ಅವೆಲ್ಲವನ್ನೂ ಬಿಡುಗಡೆ ಮಾಡಲಿ ಎಂದು ತಿರುಗೇಟು ನೀಡಿದರು.
ನಾನು ಏನಾದರೂ ತಪ್ಪು ಮಾಡಿದ್ದರೆ ಯಾವ ಶಿಕ್ಷೆಗೆ ಬೇಕಾದರೂ ಒಳಗಾಗುತ್ತೇನೆ. ಅವರು ಎಲ್ಲ ದಾಖಲೆಗಳನ್ನೂ ಬಿಡುಗಡೆ ಮಾಡಲಿ ಎಂದು ಹೇಳಿದರು.