173 ಮೊಬೈಲ್‌ ನಾಶ : ಕೇಜ್ರಿ ಮೇಲೆ ಇ.ಡಿ. ಆರೋಪ

| Published : Apr 25 2024, 01:08 AM IST / Updated: Apr 25 2024, 04:36 AM IST

kejriwal news 02
173 ಮೊಬೈಲ್‌ ನಾಶ : ಕೇಜ್ರಿ ಮೇಲೆ ಇ.ಡಿ. ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ನವದೆಹಲಿ: ಅಬಕಾರಿ ಹಗರಣದ ಆರೋಪದಡಿ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ಈ ಅಫಿಡವಿಟ್ ನಲ್ಲಿ 173 ಮೊಬೈಲ್ ಫೋನ್ ಗಳನ್ನು ನಾಶಪಡಿಸುವ ಮೂಲಕ ಆಪ್ ನಾಯಕ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆಂದು ಇಡಿ ಆರೋಪ ಮಾಡಿದೆ.

ಮೊಬೈಲ್ ಹಾಳು ಮಾಡಿ ಸಾಕ್ಷ್ಯ ನಾಶಕ್ಕೆ ಪ್ರಯತ್ನ?:

ದೆಹಲಿ ಸಿಎಂ ವಿರುದ್ಧ ಅಫಿಡವಿಟ್ ನಲ್ಲಿ ಹಲವು ಆರೋಪ ಮಾಡಿರುವ ಇಡಿ, ‘ಅರವಿಂದ್ ಕೇಜ್ರಿವಾಲ್ ಅವರನ್ನು ದೀರ್ಘಾವಧಿ ಹಗರಣದಲ್ಲಿ ಬಂಧನ ಮಾಡಲಾಗಿದೆ. ಆದರೆ ಈ ವೇಳೆಯಲ್ಲಿ ಕೇಜ್ರಿವಾಲ್ ದೊಡ್ಡ ಪ್ರಮಾಣದಲ್ಲಿ ಸಾಕ್ಷ್ಯ ನಾಶ ಪಡಿಸಿದ್ದಾರೆ. ಈ ಅಕ್ರಮವನ್ನು ಎಸಗುವ ಸಮಯದಲ್ಲಿ ಸಿಕ್ಕಿ ಬೀಳಬಾರದು, ಹಗರಣದ ಬಗ್ಗೆ ಯಾವುದೇ ಸುಳಿವು ಸಿಗಬಾರದು ಎನ್ನುವ ಕಾರಣಕ್ಕೆ ಸುಮಾರು 170 ಮೊಬೈಲ್ ಫೋನ್ ಗಳನ್ನು ನಾಶ ಪಡಿಸಿದ್ದರು. 

ಈ ವಿಚಾರ ದೃಢ ಪಟ್ಟ ಕಾರಣಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ’ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ.ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವುದಕ್ಕೂ ಮುನ್ನ ಅವರಿಗೆ 9 ಸಲ ಸಮನ್ಸ್ ನೀಡಲಾಗಿತ್ತು. ಆದರೆ ಪ್ರತಿ ಬಾರಿಯೂ ಅವರು ನ್ಯಾಯಾಲಯಕ್ಕೆ ಹಾಜರಾಗದೇ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ಒತ್ತಿ ಹೇಳಿರುವ ಇಡಿ, ದೆಹಲಿ ಸಿಎಂ ಉಚ್ಚ ನ್ಯಾಯಾಲಯದಲ್ಲಿ ಬಂಧನದಿಂದ ರಕ್ಷಣೆ ಪಡೆಯುವಲ್ಲಿ ವಿಫಲವಾದ ಕಾರಣಕ್ಕಾಗಿ ಅವರನ್ನು ಬಂಧಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಪ್ರಸ್ತಾಪಿಸಿದೆ.