ನಮ್ಮಲ್ಲಿ ಇರುವ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾದವರೇ ಇದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು ಎಂದು ಹೇಳಿದರು.

 ಬೆಂಗಳೂರು : ನಮ್ಮಲ್ಲಿ ಇರುವ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾದವರೇ ಇದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ

ಗುರುವಾರ ಕಾಂಗ್ರೆಸ್‌ನ ಹಿರಿಯ ನಾಯಕರ ಮನೆಗೆ ಭೇಟಿ ನೀಡಿದ್ದು ಸಮಸ್ಯೆ ಬಗೆಹರಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ

ಪಕ್ಷದಲ್ಲಿ 140 ಶಾಸಕರು ಹಾಗೂ 40 ಪರಿಷತ್ ಸದಸ್ಯರಿದ್ದು, ಆ ಪೈಕಿ ನಾವು ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ ಮಾತ್ರ. ನಮ್ಮ ಪಕ್ಷದಲ್ಲಿ ಎಲ್ಲರೂ ಅರ್ಹರೇ. ನಾವು ಅವರ ಆಸೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿದ್ದು, ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದರು.