ಸಿಎಂ, ಸ್ಪೀಕರ್‌ಗೆ ಎಲ್ಲರೂ ಗೌರವ ನೀಡ್ತಾರೆ: ಸಚಿವ ಸತೀಶ

| Published : Nov 18 2023, 01:00 AM IST

ಸಿಎಂ, ಸ್ಪೀಕರ್‌ಗೆ ಎಲ್ಲರೂ ಗೌರವ ನೀಡ್ತಾರೆ: ಸಚಿವ ಸತೀಶ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್‌ ಸಾಬ್‌ ಎನ್ನುತ್ತಾರೆ ಎಂಬ ಸಚಿವ ಜಮೀರ್‌ ಅಹ್ಮದ್‌ಖಾನ್‌ ಹೇಳಿಕೆಗೆ ಪ್ರತಿಕ್ರಿಯೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಖ್ಯಮಂತ್ರಿ, ಸ್ಪೀಕರ್‌ ಹುದ್ದೆಗೆ ಎಲ್ಲರೂ ಗೌರವ ನೀಡುತ್ತಾರೆ. ಈ ಹುದ್ದೆಗಳಿಗೆ ಯಾವುದೇ ಜಾತಿ, ಧರ್ಮ ಇರುವುದಿಲ್ಲ. ಎಲ್ಲರೂ ಗೌರವ ನೀಡುತ್ತಾರೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುವರ್ಣ ವಿಧನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್‌ ಸಾಬ್‌ ಎನ್ನುತ್ತಾರೆ ಎಂಬ ಸಚಿವ ಜಮೀರ್‌ ಅಹ್ಮದ್‌ಖಾನ್‌ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4 ರಿಂದ ನಡೆಯಲಿರುವ ವಿಧಾನ ಮಂಡಳದ ಅಧಿವೇಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಯಾವುದೇ ತೊಂದರೆ ಎದುರಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಂತೆ ಜಿಲ್ಲೆಯ ಶಾಸಕರ ಜೊತೆಗೆ ಸಭೆ ನಡೆಸಲಾಗುವುದು. ಸುವರ್ಣ ಸೌಧಕ್ಕೆ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಕಚೇರಿಗಳ ಸ್ಥಳಾಂತರ ಆಗುವುದಿಲ್ಲ ಎಂದರು.

ರೈತರ ಆತಿಥ್ಯಕ್ಕೆ ಧನ್ಯವಾದ:

ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಳದ ಅಧಿವೇಶನಕ್ಕೆ ಆಗಮಿಸುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ವಸತಿ, ಊಟದ ವ್ಯವಸ್ಥೆ ಮಾಡಿ ಆತಿಥ್ಯ ಸ್ವೀಕರಿಸಲು ಆಹ್ವಾನಿಸಿರುವ ರೈತರ ನಿರ್ಧಾರ ಒಳ್ಳೆಯದಾಗಿದೆ. ರೈತರಿಗೆ ನಾನು ಧನ್ಯವಾದ ಹೇಳುತ್ತೇನೆ. ಆದರೆ, ಇದು ಅನುಷ್ಠಾನಗೊಳ್ಳುವುದು ಕಷ್ಟಸಾಧ್ಯ. ರೈತರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ವಿವರಿಸಿದರು.

ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾವನೆ ಸದ್ಯಸರ್ಕಾರದ ಮುಂದಿಲ್ಲ. ನಾವು ನಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಜಿಲ್ಲಾ ವಿಭಜನೆ ಸಂಬಂಧ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.