ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.

ಬೆಂಗಳೂರು :  ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.

 ಎಲ್ಲಾ ಸಚಿವರ ವಿಶೇಷಾಧಿಕಾರಿ ಈ ರೀತಿ ಟಿಪ್ಪಣಿ ಬರೆಯುವುದು ವಾಡಿಕೆಯಾದರೂ ಇದೀಗ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಎಂಜಿನಿಯರ್ಸ್‌ ಸಂಘವು ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ ಶೇ.10ಕ್ಕೆ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಮನವಿ ಸಲ್ಲಿಸಿತ್ತು. ಯಾವುದೇ ಮನವಿ ಪತ್ರ ಸಲ್ಲಿಕೆಯಾದರೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿಶೇಷ ಕರ್ತವ್ಯಾಧಿಕಾರಿ ಟಿಪ್ಪಣಿ ಬರೆದು ವಿಲೇವಾರಿ ಮಾಡುವುದು ವಾಡಿಕೆ. 

ಈ ಬಗ್ಗೆ ಮುಂದಿನ ಹಂತದ ಅಧಿಕಾರಿಗಳು ಸಮಂಜಸವಿದ್ದರೆ ಮಾತ್ರ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಈ ರೀತಿ ಸಲ್ಲಿಕೆಯಾಗಿದ್ದ ಮನವಿ ಪತ್ರಕ್ಕೆ ಸಚಿವ ಜಮೀರ್‌ ಅಹಮದ್‌ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳಿಗೆ ಬರೆದಿದ್ದಾರೆ. ಹೀಗಾಗಿ ಸರ್ಕಾರ ಮುಸ್ಲಿಮರ ಮೀಸಲಾತಿಯನ್ನು ಶೇ.4 ರಿಂದ 10ಕ್ಕೆ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವಿವಾದ ಉಂಟಾಗಿದೆ.