ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

| Published : May 30 2024, 12:45 AM IST / Updated: May 30 2024, 04:33 AM IST

ಸಾರಾಂಶ

ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಹಾಗೆಯೇ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂತೆರೆ ಬೀಳಲಿದೆ.

ನವದೆಹಲಿ: ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಹಾಗೆಯೇ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂತೆರೆ ಬೀಳಲಿದೆ.

ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. ಬಳಿಕ ಜೂನ್ 1ರಂದು ಮತದಾನ ನಡೆಯಲಿದೆ.

7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42 ಕ್ಷೇತ್ರಗಳು ಮತದಾನ ಕಾಣಲಿವೆ.

ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಚಂಡೀಗಢ ಇವು ಚುನಾವಣೆ ನಡೆವ ರಾಜ್ಯ/ಕೇಂದ್ರಾಡಳಿತ ಪ್ರದೇಶ..