ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆಗೆ ಒತ್ತಡ ಹೆಚ್ಚಾಗಿದ್ದು, ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಐದು ಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆಗೆ ಒತ್ತಡ ಹೆಚ್ಚಾಗಿದ್ದು, ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಐದು ಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದಾರೆ.
ಮುಂದಿನ ವಾರ ಮತ್ತೊಂದು ತಂಡ ದೆಹಲಿಗೆ
ಅಲ್ಲದೆ, ಮುಂದಿನ ವಾರ ಮತ್ತೊಂದು ತಂಡ ದೆಹಲಿಗೆ ತೆರಳಲಿದ್ದು, ಸಂಪುಟ ಪುನಾರಚನೆಗೆ ಮತ್ತಷ್ಟು ಒತ್ತಡ ಹಾಕಲಿದೆ ಎಂದು ತಿಳಿದು ಬಂದಿದೆ.
ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಶ್ರೀನಿವಾಸ್ ಮಾನೆ, ಶಾಸಕ ಯಾಸಿರ್ ಖಾನ್ ಪಠಾಣ್, ಖನೀಜ್ ಫಾತಿಮಾ ಅವರು ದೆಹಲಿಗೆ ತೆರಳಿದ್ದಾರೆ. ಪ್ರಿಯಕೃಷ್ಣ ಅವರು ದೆಹಲಿಗೆ ತೆರಳಿರುವುದಾಗಿ ಹೇಳುತ್ತಿದ್ದರೂ ಖಚಿತಗೊಂಡಿಲ್ಲ.
ಹಿಂದೆ ಅಶೋಕ್ ಪಟ್ಟಣ್ ಸೇರಿ ಹಲವು ಶಾಸಕರು ದೆಹಲಿಗೆ
ಈ ಹಿಂದೆ ಅಶೋಕ್ ಪಟ್ಟಣ್ ಸೇರಿ ಹಲವು ಶಾಸಕರು ದೆಹಲಿಗೆ ತೆರಳಿ ಸುರ್ಜೇವಾಲಾ ಭೇಟಿಯಾಗಿದ್ದರು. ಇದೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಅಗತ್ಯದ ಬಗ್ಗೆ ಪ್ರತಿಪಾದಿಸಲಿದ್ದಾರೆ. ಜತೆಗೆ ಸಂಪುಟ ಪುನಾರಚನೆ ವೇಳೆ ತಮ್ಮ ಹೆಸರನ್ನೂ ಪರಿಗಣಿಸುವಂತೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
