ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜ್‌ ಕುಮಾರ್‌ ಘೋಷಣೆ

| N/A | Published : Sep 28 2025, 11:25 AM IST

Shivarajkumar Geetha Shivarajkumar

ಸಾರಾಂಶ

ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜ್‌ ಕುಮಾರ್‌ ಘೋಷಿಸಿದ್ದಾರೆ.

ನಗರದ ಬಂಜಾರ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

 ಶಿವಮೊಗ್ಗ: ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜ್‌ ಕುಮಾರ್‌ ಘೋಷಿಸಿದ್ದಾರೆ.

ನಗರದ ಬಂಜಾರ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.  

ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸದಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ. ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು.

Read more Articles on