ಮ.ಪ್ರ. ಬಿಟ್ಟು ಉಳಿದ ಎಲ್ಲೆಡೆ ಆಡಳಿತಾರೂಢ ಪಕ್ಷಗಳಿಗೆ ಸೋಲು

| Published : Dec 04 2023, 01:30 AM IST

ಸಾರಾಂಶ

ಚುನಾವಣಾ ಫಲಿತಾಂಶ ಪ್ರಕಟಗೊಂಡ 3 ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತ ಪಕ್ಷಗಳು ಕೊಚ್ಚಿ ಹೋಗಿದ್ದು, ಮಧ್ಯಪ್ರದೇಶದಲ್ಲಿ ಮಾತ್ರ ಆಡಳಿತ ವಿರೋಧಿ ಅಲೆಯನ್ನೂ ಮೀರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತೊಮ್ಮೆ ಅಧಿಕಾರದ ಗದ್ದುಗೆಯೇರಿದ್ದಾರೆ.

- 3 ರಾಜ್ಯಗಳ ಫಲಿತಾಂಶದಲ್ಲಿ ಪ್ರತಿಫಲಿಸಿದ ಆಡಳಿತ ವಿರೋಧಿ ಅಲೆ

- ಮ.ಪ್ರ.ದಲ್ಲಿ ಆಡಳಿತ ವಿರೋಧಿ ಅಲೆಯನ್ನೂ ಮೀರಿ ಗೆದ್ದ ಶಿವರಾಜ್‌ನವದೆಹಲಿ: ಚುನಾವಣಾ ಫಲಿತಾಂಶ ಪ್ರಕಟಗೊಂಡ 3 ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತ ಪಕ್ಷಗಳು ಕೊಚ್ಚಿ ಹೋಗಿದ್ದು, ಮಧ್ಯಪ್ರದೇಶದಲ್ಲಿ ಮಾತ್ರ ಆಡಳಿತ ವಿರೋಧಿ ಅಲೆಯನ್ನೂ ಮೀರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತೊಮ್ಮೆ ಅಧಿಕಾರದ ಗದ್ದುಗೆಯೇರಿದ್ದಾರೆ.ತೆಲಂಗಾಣ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಆಡಳಿತಾರೂಢ ಪಕ್ಷಗಳಾಗಿದ್ದ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಅಲ್ಪಮತಕ್ಕೆ ಕುಸಿದಿವೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಕಸಿದಿದ್ದರೆ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮಧ್ಯಪ್ರದೇಶದಲ್ಲಿ ವೈರುಧ್ಯದಂತೆ ಶಿವರಾಜ್‌ ಸಿಂಗ್‌ ಚೌಹಾಣ್‌ ಭಾರೀ ಗೊಂದಲದ ನಡುವೆಯೂ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಪಕ್ಷದ ಜನಪ್ರಿಯತೆಗೆ ಯಾವುದೇ ಕುತ್ತು ಬಂದಿಲ್ಲ ಎಂಬುದನ್ನು ಜನಮತದಲ್ಲಿ ಸಾಬೀತುಪಡಿಸಿದ್ದಾರೆ.ಮಧ್ಯಪ್ರದೇಶ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ 2018 ರಿಂದ 2020ರವರೆಗೆ 18 ತಿಂಗಳನ್ನು ಹೊರತುಪಡಿಸಿ 2005ರಿಂದ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.