ಸಾರಾಂಶ
ಬೆಂಗಳೂರು : ಬಿಬಿಎಂಪಿ ಚುನಾವಣೆಯನ್ನು ವಿಳಂಬ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ರೇಟರ್ ಬೆಂಗಳೂರು ಕಾಯ್ದೆ ರಚನೆಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ವಿಳಂಬ ಮಾಡಲು ಗ್ರೇಟರ್ ಬೆಂಗಳೂರು ರಚನೆಗೆ ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಸ್ ಆಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಒಂದು ಗುಂಡಿಯನ್ನೂ ಮುಚ್ಚಿಲ್ಲ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಈ ಕಾಯ್ದೆ ವಾಪಸ್ ಪಡೆದು ಬಿಬಿಎಂಪಿಗೆ ಚುನಾವಣೆ ನಡೆಸಲಾಗುವುದು ಎಂದು ಭರವಸೆ ನೀಡಿದರು.--
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸಲು ಮೆಟ್ರೋ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಜೊತೆಗೆ ಪ್ರತ್ಯೇಕ ರೈಲು ವ್ಯವಸ್ಥೆ ಬೇಕೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ.
-ವಿ.ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ.