ಬಡವರಿಗೆ ನೆರವಾದ ಗ್ಯಾರಂಟಿ ಯೋಜನೆ

| Published : Apr 17 2024, 01:21 AM IST

ಸಾರಾಂಶ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಿದ್ದಾರೆ. ಅಂಥದ್ದೊಂದು ಐತಿಹಾಸಿಕ ಯೋಜನೆಯನ್ನು ರೂಪಿಸಿ ಬಡವರ ಬೆನ್ನೆಲುಬಾಗಿದ್ದಾರೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಬಡವರಿಗೆ ಉಚಿತವಾಗಿ ನೀಡಿದೆ. ಇದರಿಂದ ಬಡವರಿಗೆ ಮತ್ತು ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಚಿಕ್ಕಬಳ್ಳಾಪುರ ನಗರ ಮತ್ತು ತಿಪ್ಪೇನ ಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಪೋಶೆಟ್ಟಿ ಹಳ್ಳಿ,ತಿಪ್ಪೇನಹಳ್ಳಿ, ಆವುಲಗುರ್ಕಿ, ಎಸ್ ಗೊಲ್ಲಹಳ್ಳಿ, ಹಾರೋಬಂಡೆ , ಮಂಚನಬಲೆ ಜಿಲ್ಲಾ ಪಂಚಾಯತಿ ಕ್ಷೇತ್ರವ್ಯಾಪ್ತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಪರ ಚುಣಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೋಂಡು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ಐತಿಹಾಸಿಕ ಯೋಜನೆ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಿದ್ದಾರೆ. ಅಂಥದ್ದೊಂದು ಐತಿಹಾಸಿಕ ಯೋಜನೆಯನ್ನು ರೂಪಿಸಿ ಬಡವರ, ಶ್ರಮಿಕರ, ಕೂಲಿ ಕಾರ್ಮಿಕರ, ರೈತರ, ಮಹಿಳೆಯರ ದಿನನಿತ್ಯದ ಬೇಗೆಗೆ ಬೆನ್ನೆಲುಬಾಗಿ ನಿಂತು ಅದನ್ನು ನಿವಾರಿಸುವ ಮಹತ್ತರ ಕೆಲಸ ಮಾಡುತ್ತಿದ್ದಾರೆಂದರು.

ನಮ್ಮ ತೆರಿಗೆ ಪಾಲನ್ನು ಕೊಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ನಮ್ಮ ಜನರ ತೆರಿಗೆ ನಮಗೇ ನೀಡುತ್ತಿಲ್ಲ ಮತ್ತು ಬರ ಪರಿಹಾರದ ಹಣವನ್ನು ನೀಡಿಲ್ಲಾ.ಈ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬರ ಪರಿಹಾರವಾಗಿ ಈವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎನ್‌ಡಿಎದಿಂದ ಬದುಕು ಮೂರಾಬಟ್ಟೆ

ಹತ್ತು ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಜನರ ಬದುಕು ಮೂರಾ ಬಟ್ಟೆ ಮಾಡಿದೆ.ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ. ಈ ಭಾರಿ ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದಲ್ಲಿ ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾವಾಗದಂತೆ ನೋಡಿಕೊಳ್ಳುತ್ತೇವೆ. ಉತ್ತರ ಭಾರತಕ್ಕೆ ರಾಜ್ಯದ ಸಂಪನ್ಮೂಲ ಹೆಚ್ಚಿನ ಪಾಲು ನೀಡುವುದನ್ನು ತಡೆಗಟ್ಟಿ ರಾಜ್ಯಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು.

ಜನಸಾಮಾನ್ಯರು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸ ನೋಡಿ ಒಗ್ಗಟ್ಟಾಗಿ ಕ್ಷೇತ್ರದೆಲ್ಲಡೆ ಶಕ್ತಿ ತುಂಬುತ್ತಿರುವುದನ್ನು ನೋಡಿ ತಮಗೆ ಸಂತಸವಾಗುತ್ತಿದೆ. ಬಿಜೆಪಿ ಪಕ್ಷಕ್ಕೆ ನೀವು ಈ ಬಾರಿ ತಕ್ಕ ಪಾಠ ಕಲಿಸಿ, ಬಡವರ, ರೈತರ, ಮಹಿಳೆಯರ ರಕ್ಷಣೆಗಾಗಿ ಇವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಆಶೀರ್ವದಿಸಬೇಕು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್ ರಕ್ಷಾರಾಮಯ್ಯರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಹಲವರು ಕಾಂಗ್ರೆಸ್‌ಗೆ ಸೇರ್ಪಡೆ

ಶಾಸಕರ ಕಾರ್ಯವೈಕರಿ ಹಾಗು ಬಡವರ ಪರ ಕಾಳಜಿಯನ್ನ ಮೆಚ್ಚಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಗಳಳ ನೂರಾರು ಜನ ಅನ್ಯ ಪಕ್ಷಗಳ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡರು. ಕಾಂಗ್ರೇಸ್ ಪಕ್ಷದ ಶಾಲು ಹಾಕಿ ಬರಮಾಡಿಕೊಂಡ ಪ್ರದೀಪ್ ಈಶ್ವರ್ ಇನ್ನಷ್ಟು ಹಳ್ಳಿಗಳಲ್ಲಿ ಅನೇಕ ಮುಖಂಡರು ಪಕ್ಷ ಸೇರ್ಪಡೆಗೊಂಡು ರಕ್ಷಾ ರಾಮಯ್ಯನವರಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸುತ್ತಾರೆಂದು ಪ್ರದೀಫ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ.ಸಿ.ರಾಜಾಕಾಂತ್, ಕೆ.ಎಲ್.ಶ್ರೀನಿವಾಸ್, ಸುರೇಶ್, ನಾರಾಯಣಸ್ವಾಮಿ, ನುಗುತಹಳ್ಳಿ ರವಿ, ಅಡವಿಗೊಲ್ಲವಾರಹಳ್ಳಿ ನಾಗರಾಜ್, ಬಾಬಾಜಾನ್, ಅಂಗರೇಖನಹಳ್ಳಿ ರವಿ, ಮಂಚನಬಲೆ ಮಧು,ಡ್ಯಾನ್ಸ್ ಶ್ರೀನಿವಾಸ್,ವೆಂಕಟ್, ತಿರುಮಲಪ್ಪ, ಕೃಷ್ಣ, ವಿನಯ್ ಬಂಗಾರಿ, ಅಲ್ಲು ಅನಿಲ್ ಮತ್ತಿತರರು ಇದ್ದರು.