2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬನ್ನೂರು : 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನತಾದಳ-ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ
ಮೈಸೂರು ಜಿಲ್ಲೆ ಬನ್ನೂರಿನಲ್ಲಿ ಜನರೊಂದಿಗೆ ಜನತಾದಳ-ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬನ್ನೂರು, ದೇವೇಗೌಡರ ಕಾಲದಿಂದಲೂ ಜೆಡಿಎಸ್ ಅನ್ನು ಕೈ ಹಿಡಿದ ಸ್ಥಳ. ಹಿಂದಿನ ಚುನಾವಣೆಯಲ್ಲಿ ಬಲಿಷ್ಟ ನಾಯಕನನ್ನು ಸೋಲಿಸಿ ಜೆಡಿಎಸ್ ಬಾವುಟವನ್ನು ಮೊದಲ ಬಾರಿಗೆ ಹಾರಿಸಿದ ಕೀರ್ತಿ ನೀಡಿದ ಭಾಗವಾಗಿದ್ದು, ಈ ಭಾಗದಿಂದಲೇ ಜೆಡಿಎಸ್ ಕಹಳೆ ಮೊಳಗಲಿದೆ ಎಂದರು.
ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು
ಈ ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ 4 ಲಕ್ಷ ರು. ಸಾಲವನ್ನು ರಾಜ್ಯದ ಜನತೆ ಮೇಲೆ ಹೊರಿಸಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದರು.
