ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ: ಗೌಡರ ಸ್ಫೋಟಕ ಹೇಳಿಕೆ

| Published : Apr 13 2024, 01:48 AM IST / Updated: Apr 13 2024, 04:10 AM IST

HD Devegowda Vs Siddu
ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ: ಗೌಡರ ಸ್ಫೋಟಕ ಹೇಳಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ.

 ಕೊಳ್ಳೇಗಾಲ :   ಜನಸಾಮಾನ್ಯರ ಒಳಿತಿಗಾಗಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಕಂಡು ಸೋಲುವ ಭೀತಿಯಿಂದ ಬಿಜೆಪಿ ಹಾಗೂ ಜೆಡಿಎಸ್‌ನವರು ಮೈತ್ರಿ ಮಾಡಿಕೊಂಡಿದ್ದಾರೆ. ಸೋಲುವ ಭೀತಿಯಿಂದಲೇ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಇರಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳು ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ: ಗೌಡ ಗುದ್ದು

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ. ಅಂದ ಮೇಲೆ ಅವರ ಗ್ಯಾರಂಟಿಗಳು ಮುಂದುವರಿಯುವ ಬಗ್ಗೆ ಹೇಗೆ ಗ್ಯಾರಂಟಿ ನೀಡುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ವ್ಯಂಗ್ಯವಾಡಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ. ಅಂದ ಮೇಲೆ ಅವರ ಗ್ಯಾರಂಟಿಗಳು ಮುಂದುವರಿಯುವ ಬಗ್ಗೆ ಹೇಗೆ ಗ್ಯಾರಂಟಿ ನೀಡುತ್ತಾರೆ ಎಂದರು.