ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

| Published : Oct 29 2024, 01:09 AM IST / Updated: Oct 29 2024, 03:55 AM IST

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಚನ್ನಪಟ್ಟಣ: ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಸೋಮವಾರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿನ ಶ್ರೀ ಚಾಮುಂಡೇಶ್ವರಿ ತಾಯಿ ಒಡೆಯರ್ ಮನೆತನದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ದುಷ್ಕೃತ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ಅಂತಹ ಕುಟುಂಬಕ್ಕೆ ಧಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡು ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ರಾಜ ವಂಶಸ್ಥ, ಸಂಸದ ಯದುವೀರ್ ಒಡೆಯರ್ ಉಪಸ್ಥಿತರಿದ್ದರು.