ಸಾರಾಂಶ
ರಾಜ್ಯದಲ್ಲಿ 60 ಪರ್ಸೆಂಟ್ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.
ಗುಡಿಬಂಡೆ(ಚಿಕ್ಕಬಳ್ಳಾಪುರ): ರಾಜ್ಯದಲ್ಲಿ 60 ಪರ್ಸೆಂಟ್ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿಧಾನಸಭೆ ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಸೋಲು ಎದುರಾಗಿದ್ದರಿಂದ ಕುಮಾರಸ್ವಾಮಿ ಬೇಸತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳ ಮತಗಳಿಗಿಂತ ಕಾಂಗ್ರೆಸ್ ಹೆಚ್ಚು ಮತ ಪಡೆದುಕೊಂಡಿದೆ. ಜೆಡಿಎಸ್- ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ಸಹ ಕಳೆದ ಬಾರಿ ಬಿಜೆಪಿ ಪಡೆದುಕೊಂಡಿದ್ದಕ್ಕಿಂತ 12 ಸಾವಿರ ಕಡಿಮೆ ಮತಗಳನ್ನು ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಈ ಮೂಲಕ ಬಿಜೆಪಿಯವರು ದೋಖಾ ಮಾಡಿದ್ದಾರೆ’ ಎಂದರು.