ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ - 1.5 ಗಂಟೆ ಚರ್ಚೆ

| N/A | Published : Apr 07 2025, 10:49 AM IST

Dr G parameshwar
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ - 1.5 ಗಂಟೆ ಚರ್ಚೆ
Share this Article
  • FB
  • TW
  • Linkdin
  • Email

ಸಾರಾಂಶ

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

 ಬೆಂಗಳೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಭಾನುವಾರ ಸದಾಶಿವನಗರದ ನಿವಾಸಕ್ಕೆ ತೆರಳಿದ ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಈ ಭೇಟಿ ವೇಳೆ ರಾಜಕೀಯದ ಬಗ್ಗೆ ಅವರೂ ಕೇಳಲಿಲ್ಲ, ನಾನೂ ಏನೂ ಹೇಳಲಿಲ್ಲ. ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಅವರದ್ದೇ ಆದ ಮೂಲಗಳಿವೆ. ಅವುಗಳಿಂದ ಪಡೆಯುತ್ತಾರೆ. ಇದೊಂದು ಸೌಜನ್ಯದ ಭೇಟಿ ಅಷ್ಟೆ ಎಂದರು.

ಅವರು ನನಗೆ ಹಿರಿಯಣ್ಣ ಇದ್ದ ಹಾಗೆ. ನಮ್ಮದು ಒಂದೇ ಕುಟುಂಬ. ಆರೋಗ್ಯ ವಿಚಾರಿಸಿದೆ. ಕಾಫಿ ಕೊಟ್ಟರು, ಕುಡಿದೆ. ಮಕ್ಕಳು, ಮರಿ ಎಲ್ಲರನ್ನೂ ಮಾತನಾಡಿಸಿದೆ. ಕುಟುಂಬದ ವಿಚಾರ ಚರ್ಚೆ ಮಾಡಿದ್ದು ಬಿಟ್ಟರೆ ನಾವು ರಾಜಕೀಯ ವಿಚಾರಗಳ ಕುರಿತು ಮಾತೇ ಆಡಿಲ್ಲ ಎಂದು ಸ್ಪಷ್ಟಪಡಿಸಿದರು..