ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿರುವ, ಇವಿಎಂ ಬದಲು ಬ್ಯಾಲಟ್ ಪೇಪರ್ ವಿಧಾನ ಬಳಸಿಯೇ 4 ರಾಜ್ಯಗಳ ವಿಧಾನ ಪರಿಷತ್ ಚುನಾವಣೆ ನಡೆಸಿದ್ದರೂ ಕಾಂಗ್ರೆಸ್ ಪಕ್ಷವು ಕಳಪೆ ಪ್ರದರ್ಶನ ನೀಡಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ವ್ಯಂಗ್ಯವಾಡಿದ್ದಾರೆ.
ನವದೆಹಲಿ : ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿರುವ, ಇವಿಎಂ ಬದಲು ಬ್ಯಾಲಟ್ ಪೇಪರ್ ವಿಧಾನ ಬಳಸಿಯೇ 4 ರಾಜ್ಯಗಳ ವಿಧಾನ ಪರಿಷತ್ ಚುನಾವಣೆ ನಡೆಸಿದ್ದರೂ ಕಾಂಗ್ರೆಸ್ ಪಕ್ಷವು ಕಳಪೆ ಪ್ರದರ್ಶನ ನೀಡಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ವ್ಯಂಗ್ಯವಾಡಿದ್ದಾರೆ.
4 ದೊಡ್ಡ ರಾಜ್ಯಗಳಲ್ಲಿನ 28 ಸ್ಥಾನಗಳಿಗೆ ಎಂಎಲ್‌ಸಿ ಚುನಾವಣೆ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಕರ್ನಾಟಕ ಎಂಬ 4 ದೊಡ್ಡ ರಾಜ್ಯಗಳಲ್ಲಿನ 28 ಸ್ಥಾನಗಳಿಗೆ ಎಂಎಲ್‌ಸಿ ಚುನಾವಣೆಗಳು ನಡೆದವು. ಈ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸಲಾಯಿತು. ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆದ್ದಿರಬಹುದು ಎಂದು ಊಹಿಸಿ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು
ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಒಂದೂ ಕ್ಷೇತ್ರದಲ್ಲಿ ಅದು ಜಯಿಸಿಲ್ಲ.
