ಸಾರಾಂಶ
ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.
ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.
ಸ್ಥಳೀಯ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್.ಎಸ್.ಬೋಸರಾಜು ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ವರ್ಷದ ಹಿನ್ನೆಲೆಯಲ್ಲಿ ಎಲ್ಲರೂ ಕೂಡಿ ಊಟ ಮಾಡಲು ಸೇರಿದ್ದೆವು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಂತಹ ಚರ್ಚೆಗಳಾವು ನಡೆದಿಲ್ಲ, ಸಚಿವ ಸಂಪುಟದ ವಿಸ್ತರಣೆ ಬಗ್ಗೆಯೂ ಯಾವುದೇ ಮಾತುಕತೆ ಆಗಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರುವುದಿಲ್ಲ. ಈ ಅವಧಿಗೆ ನಾನು ಸಿಎಂ ಆಗುವುದಿಲ್ಲ ಎಂದೂ ಅವರು ಹೇಳಿದರು.