ಚನ್ನಪಟ್ಟಣದಲ್ಲಿ ನಿಖಿಲ್‌ ಸ್ಪರ್ಧೆಗೆ ನನ್ನ ಬೆಂಬಲವಿದೆ: ಸಿ.ಪಿ ಯೋಗೇಶ್ವರ್

| Published : Jun 27 2024, 09:30 AM IST

CP Yogeshwar, Nikhil Kumaraswamy
ಚನ್ನಪಟ್ಟಣದಲ್ಲಿ ನಿಖಿಲ್‌ ಸ್ಪರ್ಧೆಗೆ ನನ್ನ ಬೆಂಬಲವಿದೆ: ಸಿ.ಪಿ ಯೋಗೇಶ್ವರ್
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

 ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. 

ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ. ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. 

ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಇನ್ನು, ಕಾಂಗ್ರೆಸ್‌ನಿಂದ ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯುವುದು ಗ್ಯಾರಂಟಿ ಎಂದರು.