ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಇರುವೆ - ಶೀಘ್ರ ಎಲ್ಲಾ ಗೊಂದಲಕ್ಕೆ ತೆರೆ : ಬಿವೈವಿ

| Published : Jan 18 2025, 10:54 AM IST

BY vijayendraa

ಸಾರಾಂಶ

‘ನಾನೇ ಪಕ್ಷ ಕಟ್ಟುತ್ತೇನೆ. ಪಕ್ಷವನ್ನು ನಾನೇ ಅಧಿಕಾರಕ್ಕೆ ತರುತ್ತೇನೆ’ ಎಂದರೆ, ಇದರರ್ಥ ‘ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಅಂಥ ತಾನೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮೈಸೂರು : ‘ನಾನೇ ಪಕ್ಷ ಕಟ್ಟುತ್ತೇನೆ. ಪಕ್ಷವನ್ನು ನಾನೇ ಅಧಿಕಾರಕ್ಕೆ ತರುತ್ತೇನೆ’ ಎಂದರೆ, ಇದರರ್ಥ ‘ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಅಂಥ ತಾನೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಎಲ್ಲಾ ಗೊಂದಲ ಬಗೆಹರಿಯುತ್ತದೆ. ಭಿನ್ನಮತೀಯರ ಮಾತುಗಳು ನಿಲ್ಲುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಕಟ್ಟುತ್ತೇನೆ. ಒಂದು ವರ್ಷ ಯಶಸ್ವಿಯಾಗಿ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದೇನೆ. ಮುಂದೆಯೂ ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತೇನೆ ಎಂದರು.

ಯಡಿಯೂರಪ್ಪ ಅವರ ವಿರುದ್ಧ ಮಾತನಾಡುವಾಗ ಎಚ್ಚರ ವಹಿಸಿ ಎಂದು ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಗೆ ಹೇಳಿದ್ದೆ. ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಕಾರ್ಯಕರ್ತರಿಗೆ ನೋವಾಗುತ್ತದೆ. ಹಳ್ಳಿಯಿಂದ ಬಂದು ಯಡಿಯೂರಪ್ಪ ಪಕ್ಷವನ್ನು ಕಟ್ಟಿದ್ದಾರೆ ಎಂದು ಹೇಳಿದರು.