ರಾಮನಗರದಿಂದಲೇ ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ’ ಎಂದು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ದೇವೇಗೌಡರಿಗೆ ಮರುಜೀವ ಕೊಟ್ಟ ಜಿಲ್ಲೆ.
ಮದ್ದೂರು: ‘ರಾಮನಗರದಿಂದಲೇ ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ’ ಎಂದು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ದೇವೇಗೌಡರಿಗೆ ಮರುಜೀವ ಕೊಟ್ಟ ಜಿಲ್ಲೆ. ಹಾಗಾಗಿ ನಾನು ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ.
ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ
ಅಲ್ಲೇ ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಮೈತ್ರಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದರು. ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ನಿಖಿಲ್, ಸಂಪದ್ಭರಿತ ಕರ್ನಾಟಕದಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಆರ್ಥಿಕ ವ್ಯವಸ್ಥೆ ವ್ಯವಸ್ಥಿತವಾಗಿ ನಡೆಯುತ್ತಿದೆ. ದೇಶದ ಕೇವಲ ಮೂರೇ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಹಿಮಾಚಲ ಪ್ರದೇಶವನ್ನು ಕರ್ನಾಟಕ್ಕೆ ಹೋಲಿಕೆ ಮಾಡಲಾಗದು. ಕರ್ನಾಟಕ ಸಂಪದ್ಭರಿತವಾದ ರಾಜ್ಯ. ಕಾಂಗ್ರೆಸ್ ಉಸಿರಾಡುತ್ತಿರುವುದೇ ನಮ್ಮ ರಾಜ್ಯದ ಆರ್ಥಿಕತೆಯಿಂದ ಎಂದು ಟೀಕಿಸಿದರು.
ಬುಡಕ್ಕೇ ಬರುತ್ತದೆ ಎಂಬ ಕಾರಣಕ್ಕೆ ಸುಮ್ಮನಿದ್ದಾರೆ
ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಾಗ ಆ ಪಕ್ಷದ ಕೇಂದ್ರ ನಾಯಕರು ಮಾತನಾಡುತ್ತೇವೆ ಎನ್ನುತ್ತಾರೆ. ಬದಲಾವಣೆ ಮಾಡಿದರೆ ಸರ್ಕಾರಕ್ಕೆ ತೊಂದರೆಯಾದರೆ ತಮ್ಮ ಬುಡಕ್ಕೇ ಬರುತ್ತದೆ ಎಂಬ ಕಾರಣಕ್ಕೆ ಸುಮ್ಮನಿದ್ದಾರೆ ಎಂದು ಛೇಡಿಸಿದರು.
