ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಇದಲ್ಲಿ ವರುಣ್‌ ಪಕ್ಷೇತರ ಸ್ಪರ್ಧೆ?

| Published : Mar 21 2024, 01:10 AM IST / Updated: Mar 21 2024, 08:31 AM IST

ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಇದಲ್ಲಿ ವರುಣ್‌ ಪಕ್ಷೇತರ ಸ್ಪರ್ಧೆ?
Share this Article
  • FB
  • TW
  • Linkdin
  • Email

ಸಾರಾಂಶ

ಮುಂಬರುವ ಲೋಕಸಭೆ ಚುನಾವಣೆಗೆ ಸಂಸದ ವರುಣ್‌ ಗಾಂಧಿ ಉತ್ತರ ಪ್ರದೇಶದ ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುವ ಸಾಧ್ಯತೆಯಿದೆ.

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸಂಸದ ವರುಣ್‌ ಗಾಂಧಿ ಉತ್ತರ ಪ್ರದೇಶದ ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುವ ಸಾಧ್ಯತೆಯಿದೆ. 

ಇಲ್ಲಿಂದಲೇ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿರುವ ವರುಣ್‌ ಕಳೆದ ಕೆಲ ವರ್ಷಗಳಿಂದ ಬಿಜೆಪಿ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿಲ್ಲ. ಕೇಂದ್ರ ಸರ್ಕಾರದ ಕೃಷಿ ಸೇರಿದಂತೆ ಹಲವು ನೀತಿಗಳನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ. 

ಜೊತೆಗೆ ಇತ್ತೀಚೆಗೆ ಸಮಾಜವಾದಿ ಪಕ್ಷದ ಜೊತೆಗೆ ಹೆಚ್ಚಿನ ಸಲುಗೆ ಬೆಳೆಸಿಕೊಂಡಿದ್ದಾರೆ ಎಂಬ ವರದಿಗಳು ಬಂದಿದ್ದವು. ಹೀಗಾಗಿ ಈ ಬಾರಿ ಅವರಿಗೆ ಟಿಕೆಟ್‌ ನಿರಾಕರಿಸಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ. ಹೀಗಾಗಿ ವರುಣ್‌ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿಗೆ ಸಡ್ಡು ಹೊಡೆಯುವ ಸಾಧ್ಯತೆ ಇದೆ.