ಸಿದ್ದುಗೆ ತಾಕತ್ತಿದ್ದರೆ ಮುಡಾ ಕೇಸ್‌ ಸಿಬಿಐ ತನಿಖೆಗೆ ವಹಿಸಲಿ: ಬಿಎಸ್‌ವೈ

| Published : Nov 06 2024, 11:51 PM IST

ಸಿದ್ದುಗೆ ತಾಕತ್ತಿದ್ದರೆ ಮುಡಾ ಕೇಸ್‌ ಸಿಬಿಐ ತನಿಖೆಗೆ ವಹಿಸಲಿ: ಬಿಎಸ್‌ವೈ
Share this Article
  • FB
  • TW
  • Linkdin
  • Email

ಸಾರಾಂಶ

ನನ್ನ ಜೀವನ ತೆರೆದ ಪುಸ್ತಕ, ಪ್ರಾಮಾಣಿಕ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮುಡಾ ನಿವೇಶನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ನನ್ನ ಜೀವನ ತೆರೆದ ಪುಸ್ತಕ, ಪ್ರಾಮಾಣಿಕ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮುಡಾ ನಿವೇಶನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸವಾಲು ಹಾಕಿದರು.

ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಸೋಗಾಲಪಾಳ್ಯ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಬಿಐ ತನಿಖೆ ನಡೆಸಿದರೆ ನಿಮ್ಮ ಯೋಗ್ಯತೆ ಏನೆಂದು ಗೊತ್ತಾಗುತ್ತದೆ. ಒಂದು ಕ್ಷಣವೂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಬಾರದು. ತಕ್ಷಣವೇ ರಾಜಿನಾಮೆ ಕೊಟ್ಟು ತನಿಖೆ ಎದುರಿಸಲಿ.

ಸಿದ್ದರಾಮಯ್ಯ ಅವರು ಪ್ರಾಮಾಣಿಕರಾಗಿದ್ದರೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ. ಸತ್ಯಾಂಶ ಹೊರ ಬರುತ್ತದೆ. ಲೋಕಾಯುಕ್ತ ತನಿಖೆಯಿಂದ ಯಾವುದೇ ಸತ್ಯ ಹೊರ ಬರುವುದಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.

ವಾಲ್ಮೀಕಿ ಹಗರಣದ ಬೆನ್ನ ಹಿಂದೆಯೇ ಅಬಕಾರಿ ಇಲಾಖೆವೊಂದರಲ್ಲೇ 500 ಕೋಟಿ ರು. ಲೂಟಿ ಹೊಡೆದಿದ್ದಾರೆ. ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿ, ಇನ್ನು ಮುಂದೆ ಕೆಲಸ ಮಾಡಲ್ಲ‌ ಎಂದಿದ್ದಾರೆ. ಹಾಗಾಗಿ ಇಂತಹ ಭ್ರಷ್ಟ ಸರ್ಕಾರ ಕಿತ್ತು ಹಾಕಬೇಕು. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುವುದರಿಂದ ಸರ್ಕಾರ ಬೀಳುವುದಿಲ್ಲ. ಆದರೆ, ಜನಹಿತ ಮರೆತು ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ಜಾಗೃತವಾಗಬಹುದು, ಅದಕ್ಕೊಂದು ಪಾಠ ಕಲಿಸಬಹುದು ಎಂದು ಯಡಿಯೂರಪ್ಪ ತಿಳಿಸಿದರು.