ನಾನು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ಕೆಲಸವನ್ನೂ ಮಾಡಿದ್ದೇನೆ. ಕಾರ್ಯಕರ್ತನಾಗಿ, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ. ಸಮಯ ಬಂದಾಗ ವೇದಿಕೆಯಲ್ಲಿ ಕೂತು, ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು : ನಾನು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ಕೆಲಸವನ್ನೂ ಮಾಡಿದ್ದೇನೆ. ಕಾರ್ಯಕರ್ತನಾಗಿ, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ. ಸಮಯ ಬಂದಾಗ ವೇದಿಕೆಯಲ್ಲಿ ಕೂತು, ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಾನು ಜೀವನಪೂರ್ತಿ ಕಾಂಗ್ರೆಸ್ ಕಾರ್ಯಕರ್ತ
ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಜೀವನಪೂರ್ತಿ ಕಾಂಗ್ರೆಸ್ ಕಾರ್ಯಕರ್ತ. ನಾನು ಪಕ್ಷದ ಕೆಲಸಗಾರ. ಕಾರ್ಯಕನಾಗಿದ್ದಾಗಷ್ಟೇ ಅಲ್ಲ ಪಕ್ಷದ ಅಧ್ಯಕ್ಷನಾದಾಗಲೂ ಬಾವುಟ ಕಟ್ಟಿದ್ದೇನೆ. ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕೋ ಅವೆಲ್ಲವನ್ನೂ ಮಾಡಿದ್ದೇನೆ. ಸಮಯ ಬಂದಾಗ ವೇದಿಕೆಯಲ್ಲಿ ಕೂತು, ಭಾಷಣ ಮಾಡಿ ಹೋಗುವ ಕೆಲಸ ಮಾಡಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಕುರಿತ ಪ್ರಶ್ನೆಗೆ ಉತ್ತರ
ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಜಕೀಯವಾಗಿ ಯಾವುದೇ ಚರ್ಚೆಯನ್ನೂ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಈಗಾಗಲೇ ಹೇಳಿದ್ದೇವೆ. ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.

