ಸಾರಾಂಶ
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಬೆಂಗಳೂರು : ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಬುಧವಾರ ಬೆಳಗ್ಗೆ ಕತ್ರಿಗುಪ್ಪೆ, ಬನಶಂಕರಿ ಸೇರಿದಂತೆ 20ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ತೆರಿಗೆ ವಂಚನೆಗೆ ಸಂಬಂಧಿಸಿದಂತೆ ದಾಖಲೆ, ಬ್ಯಾಂಕ್ ಖಾತೆ, ಆರ್ಥಿಕ ವಹಿವಾಟು ಕುರಿತು ವಿಚಾರಣೆ ನಡೆಸಿ ಐಟಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಉದ್ಯಮಗಳನ್ನು ನಡೆಸುತ್ತಿರುವ ಉದ್ಯಮಿಗಳು, ಬಿಲ್ಡರ್‌ಗಳು ಆದಾಯಕ್ಕೆ ತಕ್ಕಂತೆ ತೆರಿಗೆ ಪಾವತಿಸದಿರುವ ಕುರಿತು ಬಂದ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೆಳಗ್ಗೆ ಪ್ರಾರಂಭವಾದ ಕಾರ್ಯಾಚರಣೆ ತಡರಾತ್ರಿವರೆಗೆ ನಡೆಯಿತು. ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಉದ್ಯಮಿಗಳು, ಬಿಲ್ಡರ್‌ಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗಿ ಆರ್ಥಿಕ ವಹಿವಾಟಿನ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ.