ಸಾರಾಂಶ
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ. ಕಾಂಗ್ರೆಸ್ ನಿರ್ನಾಮವಾಗಲಿದ್ದು, ತನ್ನ ತಪ್ಪಿನಿಂದಲೇ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ. ಕಾಂಗ್ರೆಸ್ ನಿರ್ನಾಮವಾಗಲಿದ್ದು, ತನ್ನ ತಪ್ಪಿನಿಂದಲೇ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಲೇ ಇದೆ. ಈವರೆಗೆ ಒಳಗೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿಯೇ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಪರವಾಗಿದ್ದೇವೆಂದು ಹೇಳುತ್ತಿದ್ದರೂ ತೆರೆಮರೆಯಲ್ಲಿ ಸಿಎಂ ಬದಲಾವಣೆ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಹಾಗಾಗಿ, ಕಾಂಗ್ರೆಸ್‌ನಲ್ಲಿ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ. ನಾವು ಆಪರೇಷನ್ ಕಮಲ ಮಾಡುವ ಅವಶ್ಯಕತೆಯಿಲ್ಲ. ಕಾಂಗ್ರೆಸ್ ಶಾಸಕರು, ಸಚಿವರೇ ಒಬ್ಬರಿಗೊಬ್ಬರು ಕಾಲು ಎಳೆದುಕೊಳ್ಳುತ್ತಿದ್ದಾರೆ ಎಂದು ಮೂದಲಿಸಿದರು.