ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

| N/A | Published : Sep 04 2025, 02:00 AM IST

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ ಮಾಡುವುದು ಮತ್ತು ಇಲ್ಲಿರುವ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನು ಮಾಡಬೇಕೆನ್ನುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಬೆಂಗಳೂರು :  ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ ಮಾಡುವುದು ಮತ್ತು ಇಲ್ಲಿರುವ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನು ಮಾಡಬೇಕೆನ್ನುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಜಕ್ಕೂರು ಏರೋಡ್ರೋಂ ಆವರಣದಲ್ಲಿ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಕ್ಕೂರು ಏರೋಡ್ರೋಂ ಸಮೀಪ ಮೇಲ್ಸೇತುವೆ ಇರುವುದರಿಂದ ರನ್‌ ವೇ ವಿಸ್ತರಣೆ ಸ್ವಲ್ಪ ಅಡಚಣೆ ಆಗುತ್ತಿದೆ. ಪ್ರಸ್ತುತ ಇಲ್ಲಿ 200 ಎಕರೆಗಿಂತ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ರನ್‌ ವೇ ವಿಸ್ತರಣೆಗೆ ಪಕ್ಕದಲ್ಲಿರುವ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದ್ದು, ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಬೆಲೆ ಕೂಡ ದುಬಾರಿ ಆಗಿದೆ ಎಂದರು.

ಪ್ರಸ್ತುತ ಲಭ್ಯವಿರುವ ಸ್ಥಳವನ್ನೇ ಹೇಗೆ ಉಪಯೋಗಿಸಬೇಕು ಎನ್ನುವ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆನ್ನುವ ನ್ಯಾಯಾಲಯದ ಆದೇಶವಿದ್ದು, ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

Read more Articles on