ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ

| Published : Nov 17 2023, 06:45 PM IST

ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಮುಂದುವರೆದ ಕರ್ನಾಟಕ ಸೇನಾಪಡೆಯ ಹೋರಾಟ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನೀರು‌ ನಿರ್ವಹಣಾ ಮಂಡಳಿ ಮೌನವಾಗಿವೆ. ಕೇಂದ್ರಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು.ತಮಿಳುನಾಡಿಗೆ ನೀರು ನಿಲ್ಲಿಸುವ ತನಕ ಹೋರಾಟ ಮಾಡಲಾಗುವುದು ಎಂದರು

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ರಾಚಪ್ಪ, ಆಲೂರುನಾಗೇಂದ್ರ, ತಾಂಡವಮೂರ್ತಿ,ಚಾ.ಸಿ.ಸಿದ್ದರಾಜು ಇತರರು ಭಾಗವಹಿಸಿದ್ದರು.

--------16ಸಿಎಚ್‌ಎನ್‌16

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.