ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೆಎಚ್‌ಪಿ ಬೆಂಬಲ

| Published : Mar 22 2024, 01:02 AM IST / Updated: Mar 22 2024, 09:11 AM IST

ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೆಎಚ್‌ಪಿ ಬೆಂಬಲ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಕೆಎಚ್‌ಪಿ ಬೆಂಬಲ ನೀಡುತ್ತದೆ. ಕಾಂಗ್ರೆಸ್ ಸರಕಾರ ಕೂಡ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ಸಹಕರಿಸುತ್ತಿದೆ. ಪಕ್ಷ ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸಲು ಪಕ್ಷ ಶ್ರಮಿಸಲಿದೆ

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಚೇರಿಯಲ್ಲಿ ಕೆ.ಎಚ್.ಪಿ ಮುಖಂಡರ ನಗರಗೆರೆ ಹೋಬಳಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅ‍ವರು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ತಮ್ಮನ್ನು 40 ಸಾವಿರ ಮತಗಳ ಅಂತರದಿಂದ ಕ್ಷೇತ್ರದ ಜನ ಗೆಲ್ಲಿಸಿದ್ದಾರೆ.ರಸ್ತೆ ದುರಸ್ತಿಗೆ ₹30 ಕೋಟಿ ಬಿಡುಗಡೆ

ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದೇನೆ. ಕಾಂಗ್ರೆಸ್ ಸರಕಾರ ಕೂಡ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ಸಹಕರಿಸುತ್ತಿದೆ. ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ರು.ಗಳ ಅನುದಾನ ತಂದಿದ್ದೇನೆ. ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಪಕ್ಷ ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸಲು ಶ್ರಮಿಸಬೇಕು. ಮನೆ ಮನೆಗೆ ತೆರಳಿ ಪ್ರಚಾರ ನಡೆಸಬೇಕು ಎಂದರು.ಮುಖಂಡ ಆರ್.ಆರ್.ರೆಡ್ಡಿ ಮಾತನಾಡಿ, ನಗರಗೆರೆ ಹೋಬಳಿಯಲ್ಲಿ ರಸ್ತೆಗಳು ತೀವ್ರ ಹದಗಟ್ಟಿತ್ತು. ಆಂಧ್ರದ ಗಡಿಗೆ ಹೊಂದಿಕೊಂಡಿರುವ ತಾಲೂಕಿನ ದೊಡ್ಡದಾದ ನಗರಗೆರೆ ಹೋಬಳಿಗೆ ಶಾಸಕರು ಅನುದಾನ ಒದಗಿಸಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಕೈ ಬಲಪಡಿಸಬೇಕು ಎಂದರು.ಸ

ಸಿದ್ಧಾಂತಕ್ಕೆ ಕೊಳ್ಳಿ ಇಟ್ಟ ಜೆಡಿಎಸ್‌

ಕೋಚಿಮಲ್ ನಿರ್ದೇಶಕ ಜೆ.ಕಾಂತರಾಜು ಮಾತನಾಡಿ, ಬಿಜೆಪಿ ಆಡಳಿತದ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ. ಕೋಮುವಾದಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ತನ್ನ ಜಾತ್ಯತೀತ ಸಿದ್ಧಾಂತಕ್ಕೆ ಕೊಳ್ಳಿಯಿಟ್ಟಿದೆ. ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕ್ಷೇತ್ರದಲ್ಲೂ ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕು ಎಂದರು..