ಕೆಆರ್‌ಎಸ್‌ಗೆ ಡಾ। ಆಂಜನಪ್ಪ: ಚಿಕ್ಕಬಳ್ಳಾಪುರದಿಂದ ಸ್ಪರ್ಧೆ?

| Published : Mar 23 2024, 01:03 AM IST

ಸಾರಾಂಶ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ವೈದ್ಯ ಟಿ.ಎಚ್.ಆಂಜನಪ್ಪ ಕೆ.ಆರ್.ಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ವೈದ್ಯ ಟಿ.ಎಚ್.ಆಂಜನಪ್ಪ ಕೆ.ಆರ್.ಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ಹಾಗೂ ಜನಸಾಮಾನ್ಯರ ವೈದ್ಯರು ಎಂದು ಹೆಸರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮೂಲದ ಡಾ। ಟಿ.ಎಚ್.ಆಂಜನಪ್ಪ ಕಿಮ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದು, ಕೆಆರ್‌ಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಖ್ಯಾತ ತಜ್ಞ ವೈದ್ಯರು, ಶಸ್ತ್ರಚಿಕಿತ್ಸೆಯ ಪರಿಣಿತರು ಹಾಗೂ ಜನಸಾಮಾನ್ಯರಿಗೆ ಆಡುಭಾಷೆಯಲ್ಲಿ ವೈದ್ಯಕೀಯ ಮಾಹಿತಿಗಳನ್ನು ತಿಳಿಸುವ ಮೂಲಕ ರಾಜ್ಯದಾದ್ಯಂತ ಡಾ। ಆಂಜನಪ್ಪ ಮನೆ ಮಾತಾಗಿದ್ದಾರೆ. ಅವರು ಕೆ.ಆರ್.ಎಸ್ ಪಕ್ಷ ಸೇರ್ಪಡೆಯಾಗಿದ್ದು, ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.