ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷ: ಬಿಜೆಪಿಗೆ ಹೊಸ ಚೈತನ್ಯ

| Published : Nov 16 2023, 01:15 AM IST

ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷ: ಬಿಜೆಪಿಗೆ ಹೊಸ ಚೈತನ್ಯ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯಾಗಿರುವುದು ಸ್ವಾಗತಾರ್ಹ ಹಾಗೂ ಸಂತೋಷದ ಸಂಗತಿ. ಬಿಜೆಪಿ ಹೈಕಮಾಂಡ್ ಬಹಳ ಸಮರ್ಥ ಯುವ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ ಎಂದು ಬಿಜೆಪಿ ಸ್ಥಾಪಕ ಸದಸ್ಯ ಕೆ.ಎಸ್. ಸದಾಶಿವಯ್ಯ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯಾಗಿರುವುದು ಸ್ವಾಗತಾರ್ಹ ಹಾಗೂ ಸಂತೋಷದ ಸಂಗತಿ. ಬಿಜೆಪಿ ಹೈಕಮಾಂಡ್ ಬಹಳ ಸಮರ್ಥ ಯುವ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ ಎಂದು ಬಿಜೆಪಿ ಸ್ಥಾಪಕ ಸದಸ್ಯ ಕೆ.ಎಸ್. ಸದಾಶಿವಯ್ಯ ತಿಳಿಸಿದ್ದಾರೆ. ರಾಜ್ಯ ಬಿಜೆಪಿಯ ಇಡೀ ತಂಡವೇ ವಿಜಯೇಂದ್ರ ಅವರ ಜೊತೆ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ. ಇವರ ಆಯ್ಕೆಯಿಂದ ಚದುರಿರುವ ಲಿಂಗಾಯತ ಮತಗಳು ಮತ್ತೆ ಒಟ್ಟಾಗಲಿವೆ. ಲಿಂಗಾಯಿತ ಸಮುದಾಯ ಬಿಜೆಪಿ ಜೊತೆಗೆ ಇನ್ನಷ್ಟು ಗಟ್ಟಿಯಾಗಿ ನಿಲ್ಲಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಪ್ರಧಾನಿ ಮೋದಿ ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ. ಒಟ್ಟಾರೆ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವುದು ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಫೋಟೋ.......

15-ಟಿಪಿಟಿ3

ಕೆ.ಎಸ್. ಸದಾಶಿವಯ್ಯ