ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಸೌಲಭ್ಯಕ್ಕೆ ಚಾಲನೆ

| Published : Oct 16 2023, 01:45 AM IST

ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಸೌಲಭ್ಯಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಲ್ಲಿ ಕೌಶಲ್ಯಯುತ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಹಾಗೂ ಕೌಶಲ್ಯಯುತ ಶಿಕ್ಷಣಕ್ಕಾಗಿ ಟ್ಯಾಬ್ ವಿತರಣೆ ಕಾರ್ಯಕ್ರ‍ಮ ನಗರದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐಟಿಡಿಪಿ, ಶಾಲಾ ಶಿಕ್ಷಣ ಇಲಾಖೆ ಇನ್ಫೋಸಿಸ್ ಹಾಗೂ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇನ್ಫೋಸಿಸ್ ಹಾಗೂ ರೋಟರಿ ಸಂಸ್ಥೆಗಳ ಸಹಭಾಗಿತ್ವ । ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಉಚಿತ ಡಿಜಿಟಲ್ ಟ್ಯಾಬ್ ವಿತರಣೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ವಿದ್ಯಾರ್ಥಿಗಳಲ್ಲಿ ಕೌಶಲ್ಯಯುತ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಹಾಗೂ ಕೌಶಲ್ಯಯುತ ಶಿಕ್ಷಣಕ್ಕಾಗಿ ಟ್ಯಾಬ್ ವಿತರಣೆ ಕಾರ್ಯಕ್ರ‍ಮ ನಗರದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐಟಿಡಿಪಿ, ಶಾಲಾ ಶಿಕ್ಷಣ ಇಲಾಖೆ ಇನ್ಫೋಸಿಸ್ ಹಾಗೂ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಸುವ ಸಲುವಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರೋಫೆಷನಲ್ ಸ್ಕಿಲ್, ಡಿಜಿಟಲ್ ಸ್ಕಿಲ್, ಲೈಫ್ ಸ್ಕಿಲ್ ಗುಣಮಟ್ಟ ಹೆಚ್ಚಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಅಸಕ್ತಿ ಹಾಗೂ ಕಾಳಜಿಯ ಪ್ರಯತ್ನದ ಫಲವಾಗಿ ಇನ್ಫೋಸಿಸ್ ಹಾಗೂ ರೋಟರಿ ಸಂಸ್ಥೆಗಳು ಕಾರ್ಯಕ್ರಮದ ಸಹಭಾಗಿತ್ವದ ವಹಿಸಿ ಜಿಲ್ಲೆಯ 50 ಪ್ರೌಢಶಾಲೆಗಳಿಗೆ ಉಚಿತ ಡಿಜಿಟಲ್ ಟ್ಯಾಬ್ ವಿತರಿಸಿದವು. ಪಿಪಿಟಿ ಪ್ರಾತ್ಯೇಕ್ಷಿತೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಬುಡಕಟ್ಟು ಜನರು ಶಿಕ್ಷಣದ ಮಹತ್ವ ಅರಿಯಬೇಕು. ಜಿಲ್ಲೆಯ ಗಿರಿಜನರ ವಿದ್ಯಾರ್ಥಿಗಳ ತಂದೆ ತಾಯಿ, ಪೋಷಕರಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಮುಖ್ಯವಾಹಿನಿಗೆ ತರಬೇಕು. ಮೊರಾರ್ಜಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಇನ್ನಿತರೆ ವಸತಿ ಶಾಲೆಗಳನ್ನು ಸರ್ಕಾರ ಕಾಡಂಚಿನಲ್ಲಿ ನಿರ್ಮಿಸಿದೆ. ಸರ್ಕಾರದ ಈ ಉದ್ದೇಶ ಗಿರಿಜನರಿಗೆ ಫಲಪ್ರದವಾಗಬೇಕು ಎಂದರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿಗಳ ಪಾಲಿಗೆ ಡಿಜಿಟಲ್ ಶಿಕ್ಷಣ ಕಲಿಕೆ ಆಶಾದಾಯಕವಾಗಿದೆ. ಉಚಿತ ಟ್ಯಾಬ್ ಪಡೆಯುತ್ತಿರುವ 50 ಸರ್ಕಾರಿ ಪ್ರೌಢಶಾಲೆಗಳ 100 ಶಿಕ್ಷಕರಿಗೆ ಇನ್ಫೋಸಿಸ್ ಸಂಸ್ಥೆ ತರಬೇತಿ ನೀಡುತ್ತಿರುವ ಉತ್ತಮ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಶಾಸಕರಾದ ಎಚ್.ಎಂ. ಗಣೇಶ್‌ಪ್ರಸಾದ್ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳಲು ಡಿಜಿಟಲ್ ಶಿಕ್ಷಣ ಕಲಿಕೆ ಭದ್ರಬುನಾದಿಯಾಗಲಿದೆ ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯುವಂತಾಗಬೇಕು ಎಂದರು. ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಕಾರ್ಯಕ್ರಮ ಜಿಲ್ಲೆಯ ಶೈಕ್ಷಣಿಕ ಕ್ರಾಂತಿಯ ಸುದಿನವಾಗಿದೆ. ಪ್ರಸ್ತುತ ಡಿಜಿಟಲ್ ಶಿಕ್ಷಣ ಕಲಿಕೆಗೆ ಶಿಕ್ಷಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಕಲಿಕಾ ಗುಣಮಟ್ಟ ಹೆಚ್ಚಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಒಂದು ವಿಶಿಷ್ಟ ಕಲಿಕಾ ಕಾರ್ಯಕ್ರಮ. ಜಿಲ್ಲೆಯನ್ನು 5 ಶೈಕ್ಷಣಿಕ ವಲಯಗಳನ್ನಾಗಿ ವಿಂಗಡಿಸಿದ್ದು, 812 ಸರ್ಕಾರಿ ಶಾಲೆಗಳಿವೆ. ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಮುಂಚೂಣಿ ಸ್ಥಾನ ಪಡೆಯಲು ಅವಿರತ ಶ್ರಮ ಹಾಕಲಾಗುತ್ತಿದೆ. ಈ ನಿಟ್ಟಿನಲ್ಲಿ ಡಿಜಿಟಲ್ ಶಿಕ್ಷಣ ಕಲಿಕೆ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಕೌಶಲ್ಯಕ್ಕೆ ಕನ್ನಡಿಯಾಗಲಿದೆ ಎಂದರು. ಮೊದಲ ಹಂತದಲ್ಲಿ ಜಿಲ್ಲೆಯ 50 ಸರ್ಕಾರಿ ಪ್ರೌಢಶಾಲೆಗಳಿಗೆ ಡಿಜಿಟಲ್ ಶಿಕ್ಷಣದ ಕಲಿಕೆಗಾಗಿ ಉಚಿತ ಟ್ಯಾಬ್ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅನಿವಾರ್ಯ ಕಾರಣಗಳಿಂದ ಶಾಲೆಬಿಟ್ಟ 43 ಮಂದಿ ಗಿರಿಜನ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಲಿಕಾ ತರಬೇತಿ ನೀಡಲು ರೋಟರಿ ಸಂಸ್ಥೆ ಮುಂದಡಿ ಇಟ್ಟಿದೆ. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ರೋಟರಿ ಪಂಚಶೀಲ ಇನ್ಟೆಕ್ ಸಂಸ್ಥೆಯ ಕಾರ್ಯನಿರ್ವಾಹಕ ಕಿರಣ್ ರಾಬರ್ಟ್, ಆನಂದ್, ಸಂತೋಷ್, ಸೋಮೇಶ್, ದಿನೇಶ್, ಸಂಧ್ಯಾ, ಸುಂದರ್, ವಿನಯ್, ಬಿಳಿಗಿರಿರಂಗ, ಇನ್ಫೋಸಿಸ್ ಸಂಸ್ಥೆಯ ರಂಗರಾಜನ್, ಸತೀಶ್, ಮೀನಾಕ್ಷಿ ಇದ್ದರು. ------------------- 15ಸಿಎಚ್‌ಎನ್‌51 ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣದ ಬಲವರ್ಧನೆ ಹಾಗೂ ಕೌಶಲ್ಯಯುತ ಶಿಕ್ಷಣಕ್ಕಾಗಿ ಟ್ಯಾಬ್ ವಿತರಣೆ ಕಾರ್ಯಕ್ರ‍್ರಮದಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ 50 ಸರ್ಕಾರಿ ಪ್ರೌಢಶಾಲೆಗಳಿಗೆ ಉಚಿತ ಟ್ಯಾಬ್ ವಿತರಿಸಲಾಯಿತು.