ಸಾರಾಂಶ
ಸಂಪುಟ ಪುನಾರಚನೆ, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಬೇರೆ ಯಾರೋ ನಿರ್ಧಾರ ಮಾಡಲು ಆಗಲ್ಲ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಬೆಂಗಳೂರು : ಸಂಪುಟ ಪುನಾರಚನೆ, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಬೇರೆ ಯಾರೋ ನಿರ್ಧಾರ ಮಾಡಲು ಆಗಲ್ಲ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲ ಎಂಬ ಪಕ್ಷದ ಕೆಲ ನಾಯಕರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ
ಭಾನುವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಕುರಿತ ಪ್ರಶ್ನೆಗೆ, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ ಎಂದರು.
ಹೈಕಮಾಂಡ್ ತೀರ್ಮಾನ ಮಾಡುತ್ತದೆ
ಸಂಪುಟ ಪುನಾರಚನೆಯಾದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ. ಎಲ್ಲದಕ್ಕೂ ಹೈಕಮಾಂಡ್ ಇದೆ. ಕಾದು ನೋಡೋಣ ಎಂದರು.
ಡಿ.ಕೆ.ಶಿವಕುಮಾರ್ ಅವರ ಕ್ಲೇಮ್ ಮೇಲೆ ಎಲ್ಲವೂ ನಿಂತಿದೆಯಲ್ಲವೇ ಎಂದು ಕೇಳಿದಾಗ, ಕಾದು ನೋಡೋಣ. ಇಲ್ಲಿ ಶಿವಕುಮಾರ್ ಒಬ್ಬರೇ ಕ್ಲೇಮ್ ಮಾಡುತ್ತಿಲ್ಲವಲ್ಲ. ಬಹಳಷ್ಟು ಜನರ ಕ್ಲೇಮ್ ಇದೆ. ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲವಲ್ಲ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಕಾದು ನೋಡಬೇಕು ಎಂದು ತಿಳಿಸಿದರು.
ಪಕ್ಷ ಹೇಳೋವರೆಗೂ ಡಿಕೆಶಿ ಅಧ್ಯಕ್ಷರು:
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಕೇಳಿದಾಗ, ಹೈಕಮಾಂಡ್ ಯಾವ ತೀರ್ಮಾನ, ಸಲಹೆ ನೀಡುತ್ತದೋ ಅದನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ ಎಂದು ಹೇಳಿದರು.
;Resize=(690,390))
)
;Resize=(128,128))
;Resize=(128,128))
;Resize=(128,128))
;Resize=(128,128))