ಸಾರಾಂಶ
ರಾಹುಲ್ ಗಾಂಧಿಯವರು ಅಪ್ರಬುದ್ಧರು ಮತ್ತು ಅವರ ಹೇಳಿಕೆಯಿಂದ ಕಾಂಗ್ರೆಸ್ ದಲಿತ ಮತ್ತು ಮೀಸಲಾತಿ ವಿರೋಧಿ ಎಂದು ಸಾಬೀತಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ನೆಹರು, ಇಂದಿರಾ ಮತ್ತು ರಾಜೀವ್ ಗಾಂಧಿ ಕೂಡ ಮೀಸಲಾತಿ ವಿರೋಧಿಗಳಾಗಿದ್ದರು ಎಂದು ಅವರು ಹೇಳಿದರು.
ಬೆಂಗಳೂರು: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ನಾಯಕರಲ್ಲ, ಅವರೊಬ್ಬ ಅಪ್ರಬುದ್ಧ ವ್ಯಕ್ತಿ. ಅವರ ಹೇಳಿಕೆಯಿಂದ ಕಾಂಗ್ರೆಸ್ ದಲಿತ ವಿರೋಧಿ ಮತ್ತು ಮೀಸಲಾತಿ ವಿರೋಧಿ ಎಂಬುದು ಸಾಬೀತಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಮೀಸಲಾತಿ ವಿರೋಧಿಯಾಗಿದ್ದು, ಮಾಜಿ ಪ್ರಧಾನಿಗಳಾದ ದಿವಂಗತ ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ. ಅವರ ಕುಟುಂಬವು ಮೀಸಲಾತಿ ವಿರೋಧಿ ಪರಂಪರೆಯನ್ನು ಹೊಂದಿದೆ ಎಂದು ಟೀಕಿಸಿದರು.