ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ, ಕಡುಬಡವರಿಗೆ ಉಚಿತ ನಿವೇಶನ ಯೋಜನೆ ಅರಂಭವಾಗಲಿದೆ. ಅಲ್ಲದೆ, 6 ತಿಂಗಳಲ್ಲಿ 72 ಸಾವಿರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿದ್ದೇವೆ

ಹಾನಗಲ್ಲ: ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ, ಕಡುಬಡವರಿಗೆ ಉಚಿತ ನಿವೇಶನ ಯೋಜನೆ ಅರಂಭವಾಗಲಿದೆ. ಅಲ್ಲದೆ, 6 ತಿಂಗಳಲ್ಲಿ 72 ಸಾವಿರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಕರ್ನಾಟಕ ಗೃಹ ಮಂಡಳಿ ನೂತನ ಅಧ್ಯಕ್ಷ ಶಾಸಕ ಶ್ರೀನಿವಾಸ್ ಮಾನೆ ತಿಳಿಸಿದರು.

ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧ

ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ.

ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ

ದೆಹಲಿಯಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದೆ. ಸಮರ್ಥ ಸಮೃದ್ಧ ಭಾರತ ನಿರ್ಮಾಣ ನಮ್ಮ ಆದ್ಯತೆ ಎಂದರು.